ಪಿ.ಒ.ಪಿ ಬಣ್ಣ ಲೇಪಿತ ಗಣಪತಿ ವಿಗ್ರಹಗಳ ತಯಾರಿಕೆ, ಮಾರಾಟ ನಿಷೇಧ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಸ್ವರ್ಣಗೌರಿ ಹಾಗೂ ಗಣೇಶಚತುರ್ಥಿ ಹಬ್ಬವು ಸಮೀಸುತ್ತಿದ್ದು, ಪ್ಲಾಸ್ಟ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣದ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.

ಪ್ಲಾಸ್ಟ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಇದರಿಂದ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಸಾರ್ವಜನಿಕರ ಆರೋಗ್ಯಕ್ಕೂ ದಕ್ಕೆ ಉಂಟಾಗುತ್ತದೆ. 

  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಯಾವುದೇ ಕೆರೆ, ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. 

  ನೈಸರ್ಗಿಕ, ಮಣ್ಣಿನಿಂದ ತಯಾರಿಸಿದ ಬಣ್ಣ ರಹಿತ ನೈಸರ್ಗಿಕ ಬಣ್ಣ ಲೇಪಿತ ಗೌರಿಉ ಗಣೇಶ ಮೂರ್ತಿಗಳನ್ನೇ ಪೂಜಿಸಬೇಕು. ಗೌರಿ ಗಣೇಶ ಮೂರ್ತಿಗಳನ್ನು ಮನೆಯಲ್ಲಿಯೇ ಬಕೆಟ್ ನಲ್ಲಿ ವಿಸರ್ಜಿಸಬೇಕು ಅತವಾ ಸ್ಥಳೀಯ ನಗರ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ನಿಗದಿಪಡಿಸಿರುವ ಸ್ಥಳಗಳಲ್ಲಿ ವಿಸರ್ಜಿಸಬೇಕು. ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಈ ಆದೇಶವನ್ನು ಉಲ್ಲಂಘಸಿದರೆ ಐ.ಪಿ.ಸಿ ಸೆಕ್ಷನ್ 1860ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.

   ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಆಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ಸ್ಥಳೀಯ ನಗರ ಸಂಸ್ಥೇಗಳು, ಗ್ರಾಮ ಪಂಚಾಯಿತಿಗಳ ಕಸ ಸಂಗ್ರಹಣಾ ವಾಹನಕ್ಕೆ ನೀಡಬೇಕು. 

   ಸಾರ್ವಜನಿಕವಾಗಿ ಸ್ಥಾಪಿಸುವ ಗಣೇಶಮೂರ್ತಿಯ ಚಪ್ಪರ, ಉತ್ಸವಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ಯಾವುದೇ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ರ್ಧವನಬಿ ವರ್ಧಕದ ಬಳಕೆಯನ್ನ ರಾಥ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *