ಸಂವಿಧಾನದ ಸಂರಕ್ಷಣೆ ನಮ್ಮೇಲ್ಲರ ಹೊಣೆ : ಎ.ಆರ್. ಕೃಷ್ಣಮೂರ್ತಿ

  • ಮೈಸೂರಿನಲ್ಲಿ ನ. ೨೬ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆ ; ಸಂತೇಮಹರಳ್ಳಿ ಸಂವಿಧಾನ ಜಾಗೃತಿ ಜಾಥಾಕ್ಕೆ ಕೃಷ್ಣಮೂರ್ತಿ ಚಾಲನೆ

ಚಾಮರಾಜನಗರ, ನ. ೨೩- ಅತ್ಯಂತ ಸರ್ವ ಶ್ರೇಷ್ಟವಾದ ಸಂವಿಧಾನವನ್ನು ಸಂರಕ್ಷಣೆ ಮಾಡುವ ಜೊತೆಗೆ ಭಾರತ ಸರ್ವತೋಮುಖ ಅಭಿವೃದ್ದಿಯಲ್ಲಿ ಸಂವಿಧಾನದ ಪಾತ್ರ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ನ. ೨೬ ರಂದು ನಡೆಯುವ ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕೊಳ್ಳೇಗಾಲದ ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
ತಾಲೂಕಿನ ಸಂತೇಮರಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿ ಹಳ್ಳಿ ಹಳ್ಳಿಗಳಿಗೂ ನ. ೨೬ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆಗೆ ಆಗಮಿಸುವ ಕುರಿತ ಪ್ರಚಾರ ರಥಕ್ಕೆ ಅವರು ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ ಸ್ವಾತಂತ್ರö್ಯ ಗಳಿಸಿದ ನಂತರ ದೇಶದ ಉತ್ತಮ ಭವಿಷ್ಯ ಹಾಗೂ ಸುಭದ್ರ ಆಡಳಿತ ಮತ್ತು ಎಲ್ಲರಿಗೂ ಸಾಮಾಜಿಕ ನ್ಯಾಯವನ್ನು ಕಲ್ಪಿಸುವಂತಹ ಉತ್ತಮ ಸಂವಿಧಾನವನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ರಚನೆ ಮಾಡಿಕೊಟ್ಟರು. ಭಾರತ ಸಂವಿಧಾನವನ್ನು ನ. ೨೬ ರಂದು ರಾಷ್ಟçಕ್ಕೆ ಸಮರ್ಪಣೆ ಮಾಡಿದ ದಿನವಾಗಿದ್ದು, ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಈ ವರ್ಷ ರಾಜ್ಯ ಸರ್ಕಾರ ವಿಶೇಷವಾಗಿ ಮೈಸೂರಿನಲ್ಲಿ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆಯನ್ನು ಆಯೋಜನೆ ಮಾಡಿದೆ. ಈ ಅಭೂತ ಪೂರ್ವ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ತೆರಳಬೇಕಾಗಿದೆ ಎಂದು ತಿಳಿಸಿದರು.
ಇದಕ್ಕಾಗಿ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ರಥವನ್ನು ಆಯೋಜನೆ ಮಾಡಲಾಗಿದೆ. ಎಲ್‌ಇಡಿ ಪರದೆಯಲ್ಲಿ ಅಂಬೇಡ್ಕರ್ ಅವರು ಸಂವಿಧಾನ ಸರ್ಮಪಣೆ ಮಾಡಿದ ದಿನ ಚಿತ್ರಗಳು. ಅವರು ಜೀವನ ಚರಿತ್ರೆ ಮತ್ತು ಸಂವಿಧಾನದಲ್ಲಿ ಅಡಕವಾಗಿರುವ ಅಂಶಗಳು ಮತ್ತು ದೇಶದ ಅಭಿವೃದ್ದಿಯಲ್ಲಿ ಸಂವಿಧಾನ ವಹಿಸುತ್ತಿರುವ ಮಹತ್ತರ ಪಾತ್ರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ನ. ೨೬ ರ ನಡೆಯುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಗೆ ಎಲ್ಲರು ಸಹಕಾರ ನೀಡಬೇಕು ಎಂದು ಎ.ಆರ್. ಕೃಷ್ಣಮುರ್ತಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಸಮಿತಿಯ ಮಾಜಿ ಅಧ್ಯಕ್ಷ ಹೊಂಗನೂರು ಚಂದ್ರು, ಮುಖಂಡರಾದ ಕಂದಹಳ್ಳಿ ನಂಜುAಡಸ್ವಾಮಿ, ಮಹದೇವಪ್ರಸಾದ್ ( ಪಶಿ) ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ ಇತರರು ಇದ್ದರು.

Leave a Reply

Your email address will not be published. Required fields are marked *