ಕಾವೇರಿ ನೀರು ನಿರ್ವಹಣಾ ಸಮಿತಿ ವಿರುದ್ದ ಪ್ರತಿಭಟನೆ

  • ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸತ್ತುಹೋಗಿದೆ ಎಂದು ಎಳ್ಳು, ನೀರು ಬಿಟ್ಟು ಅಕ್ರೋಶ
  • ರಾಷ್ಟ್ರೀಯ ಜಲನೀತಿ ಜಾರಿಗೆ ಶ್ರೀನಿವಾಸಗೌಡ ಆಗ್ರಹ


ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಎಳ್ಳು, ನೀರು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
   ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕದ ಪಾಲಿಗೆ ಸತ್ತು ಹೋಗಿದೆ ಎಂದು  ಎಳ್ಳು, ನೀರು ಬಿಟ್ಟು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕದ ಪಾಲಿಗೆ ಕಾವೇರಿ ನೀರು ನಿರ್ವಹಣಾ ಮಂಡಳಿ  ಸತ್ತು ಹೋಗಿದೆ ಎಂದು  ಎಳ್ಳು, ನೀರು ಬಿಟ್ಟು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ನಿರ್ವಹಣಾ ಸಮಿತಿಯ ಒಬ್ಬ ಸದಸ್ಯರು ಕರ್ನಾಟಕಕ್ಕೆ ಭೇಟಿ ನೀಡಿ ಇಲ್ಲಿನ ಜಲಾಶಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿಲ್ಲ. ಅಧ್ಯಯನ ಮಾಡಿಲ್ಲ. ಕರ್ನಾಟಕದಲ್ಲಿ ಮಳೆ ಆಗಿದೆಯೋ, ಇಲ್ಲವೋ ಪರಿಶೀಲನೆ ಮಾಡಿಲ್ಲ ಅದನ್ನು ಬಿಟ್ಟು ದೆಹಲಿಯಲ್ಲಿ ಕುಳಿತು ನೀರು ಬಿಡಿ, ನೀರು ಬಿಡಿ ಎಂದರೆ ಎಲ್ಲಿಂದ ನೀರು ಬಿಡುವುದು ಎಂದು ಕಿಡಿಕಾರಿದರು.
ಕರ್ನಾಟಕದ ಜಲಾಶಯಗಳು ಬತ್ತಿ ಹೋಗುತ್ತಿವೆ. ರಾಜ್ಯದಲ್ಲಿ ಜನತೆ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ.ಅತ್ಯಂತ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯದ ಜನತೆ ಇದ್ದಾರೆ. ಎರಡು ರಾಜ್ಯಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಿದೆ ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಪು ನೀಡುವುದು ಅತ್ಯಂತ ಖಂಡನೀಯ ವಾದದ್ದು,ತಕ್ಷಣವೇ ಕಾವೇರಿ ನೀರು ನಿರ್ವಹಣಾ ಮಂಡಳಿ ವಜಾ‌ಮಾಡಿ ರಾಷ್ಟ್ರೀಯ ಜಲನೀತಿಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ತಮಿಳುನಾಡಿನವರು ಕಾವೇರಿ ನೀರಿನ ವಿಚಾರದಲ್ಲಿ  ಪದೇಪದೇ ಖ್ಯಾತೆ ತೆಗೆಯುವುದು ಸರಿಯಲ್ಲ. ಇದು ಮುಂದುವರೆದರೆ  ಮುಂದಿನ ದಿನಗಳಲ್ಲಿ ಪುಣಜನೂರು ಗೇಟ್ ಬಂದ್ ಮಾಡಿ ತಮಿಳುನಾಡಿನ ವಾಹನ, ಉತ್ಪನ್ನ, ಸಿನಿಮಾ ಪ್ರದರ್ಶನ ತಡೆಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ  ಶಾ.ಮುರಳಿ,
ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ರಾಚಪ್ಪ, ಜಗದೀಶ್, ತಾಂಡವಮೂರ್ತಿ, ಆಟೋ ಲಿಂಗರಾಜು, ನಂಜುಂಡಸ್ವಾಮಿ, ಮುತ್ತಿಗೆ ಗೋವಿಂದ ರಾಜು, ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *