- ತಮಿಳುನಾಡಿಗೆ ನೀರು ಬಿಟ್ಟರೆ ಉಗ್ರ ಹೋರಾಟ ಕೆಲ್ಲಂಬಳ್ಳಿಸೋಮನಾಯಕ
ಚಾಮರಾಜನಗರ : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಖಾಲಿ ಕೊಡ’ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ, ಜಿಲ್ಲಾಧ್ಯಕ್ಷ ಆಲೂರುಮಲ್ಲು ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಕೈ ಖಾಲಿ ಕೊಡ ಹಿಡಿದು ಪ್ರತಿಭಟನಾನಿರತರು
ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಮಾತನಾಡಿ, ಈಗಾಗಲೇ
ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಪರಿತಪಿಸುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿವಿಷ್ಠ 3.500 ಕ್ಯೂಸೆಕ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಎಷ್ಟು ಮಟ್ಟಿಗೆ ಸರಿ?. ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು, ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಹಬಾರದು ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಆಲೂರುಮಲ್ಲು ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲ್ಕೈದು ದಿನಗಳಿಂದ ಕದ್ದುಮುಚ್ಚಿ, ರಾತ್ರೋರಾತ್ರಿಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು, ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದು ರಾಜ್ಯದ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು. ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಕರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಜಿ.ಎಂ.ಶಂಕರ್,
ವಡ್ಡಗೆರೆಕೃಷ್ಣ,ಕಾಳನಹುಂಡಿ ಮಲ್ಲಿಕ್, ಬಡಗಲಪುರ ಕೆಂಪ,ಪಣ್ಯದಹುಂಡಿ ರಾಜಣ್ಣ, ಹರದನಹಳ್ಳಿ ರಾಮಚಂದ್ರ ನಾಯಕ, ಹೆಗ್ಗೋಠಾರ ರಾಜಶೇಖರ, ರಾಜಣ್ಣ ದೇಶಿಗೌಡನಪುರ, ಮಹೇಶ್, ನಮ್ಮನೆ ಪ್ರಶಾಂತ್, ಡಿ.ಎನ್.ಉಷಾ, ಆಟೋ ಮಂಜು, ಭಾಗ್ಯ, ಮಣಿಕಂಠ ಇತರರು ಭಾಗವಹಿಸಿದ್ದರು.