ತಮಿಳುನಾಡು ಮಾಜಿ ಸಿಎಂ ಸ್ಟಾಲಿನ್ ವಿರುದ್ದ ಪ್ರತಿಭಟನೆ

  • ರಾಜ್ಯ ಸರ್ಕಾರ ಶೀಘ್ರದಲ್ಲೇ ಮೇಕೆದಾಟು ಯೋಜನೆ ಗುದ್ದಲಿ ಪೂಜೆ ಮಾಡಲು ಶ್ರೀನಿವಾಸಗೌಡ ಆಗ್ರಹ

ಚಾಮರಾಜನಗರ: ಕರ್ನಾಟಕದಲ್ಲಿ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ವಿರುದ್ದ ಕರ್ನಾಟಕ ಸೇನಾಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ರಾಷ್ಟ್ರೀಯ ಹೆದ್ದಾರಿ ತಡೆದು ಸ್ಟಾಲಿನ್ ಭಾವಚಿತ್ರ ಹರಿದು ಅವರ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಅವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಪದೇಪದೇ ಮೇಕೆದಾಟು, ಕಾವೇರಿ ವಿಚಾರವನ್ನು ಮುಂದಿಟ್ಟು ಕೊಂಡು ಪ್ರಚಾರ ಪಡೆಯುತ್ತಿರುವುದು ಅತ್ಯಂತ ಖಂಡನೀಯವಾಗಿದೆ.

ಮೇಕೆದಾಟು ವಿಚಾರದಲ್ಲಿ ಈಗಾಗಲೇ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರ ನಮ್ಮದು ಯಾವುದೇ ಅಭ್ಯಂತರ ಇರುವುದಿಲ್ಲ ಎಂದು ತಿಳಿಸಿವೆ ಆದರೂ ಕೂಡ ಸ್ಟಾಲಿನ್ ಅವರು ಮೇಕೆದಾಟು ವಿಚಾರವಾಗಿ ತಮ್ಮ ಸಂಸದರಿಂದ ಸಂಸತ್ ನಿಲುವಳಿ ಮಂಡಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ ವಾಗಿ. ರಾಜ್ಯ ಸರ್ಕಾರ ಕಾಲಾಹರಣ ಮಾಡದೆ ಶೀಘ್ರದಲ್ಲೇ ಮೇಕೆದಾಟು ಯೋಜನೆಗೆ ಗುದ್ದಲಿಪೂಜೆ ಮಾಡಬೇಕು ಎಂದು ಶ್ರೀನಿವಾಸಗೌಡ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್ ಗೋಪಾಲ್, ಕಂಡಕ್ಟರ್ ಚಾ.ಸಿ.ಸೋಮನಾಯಕ, ನಿಜಧ್ವನಿಗೋವಿಂದ, ಆಟೋ ಲಿಂಗರಾಜು, ರಾಚಪ್ಪ, ಹೊಮ್ಮ ಲೋಕೇಶ್, ಮಹೇಶ್ ಗೌಡ, ಸತೀಶ್, ಅಮಚವಾಡಿ ರಾಜು, ಶಿವು, ಡ್ಯಾನ್ಸ್ ಬಸವರಾಜು, ತಾಂಡವಮೂರ್ತಿ, ವೀರಭದ್ರ, ಸುಬ್ಬಯ್ಯ, ರಾಜೇಂದ್ರ, ನಾಗರಾಜು, , ಮುತ್ತುರಾಜು, ಸಿದ್ದ ಶೆಟ್ಟಿ, ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *