ಚಾಮರಾಜನಗರ: ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಐತಿಹಾಸಿಕ ದಿನ ಅಂಗವಾಗಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದಲ್ಲಿ ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ ನಡೆಸಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ರಾಜಣ್ಣ ಯರಿಯೂರು ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಮನುಸ್ಮೃತಿ ಪ್ರತಿಯನ್ನು ಸುಡಲು ಮುಂದಾಗ ಪೋಲಿಸರು ತಡೆದರು. ಪ್ರತಿಭಟನಾನಿರತರು ಮನುಸ್ಮೃತಿ ಪ್ರತಿ ಹರಿದು ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ರಾಜಣ್ಣ ಯರಿಯೂರು ಮಾತನಾಡಿ,ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಐತಿಹಾಸಿಕ ದಿನ ಅಂಗವಾಗಿ ಅವರ ಹೋರಾಟವನ್ನು ಮುಂದುವರಿಸುವ ಸಲುವಾಗಿ ಮನುಸ್ಮೃತಿ ಸುಡುವ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು,ಶ್ರೇಣಿಕೃತ ಜಾತಿ ವ್ಯವಸ್ಥೆಗೆ ಮುನ್ನಡಿ ಬರೆದು ಭಾರತವನ್ನು ಅಂಧಕಾರಕ್ಕೆ ತಳ್ಳಿದ್ದ ಮನುಸ್ಮೃತಿಯನ್ನು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಸುಟ್ಟು ಹಾಕಿ 98 ವರ್ಷಗಳಾದವು. ಜಾತಿ ಅಸಮಾನತೆ, ಲಿಂಗ ತಾರತಮ್ಯ, ಮಹಿಳೆಯರ ಮೇಲಿನ ದಬ್ಬಾಳಿಕೆ, ಬಹುಜನರ ಮೇಲೆ ದೌರ್ಜನ್ಯ, ಸತಿಸಹಗಮನ ಪದ್ಧತಿ, ಬಾಲ್ಯ ವಿವಾಹ, ದೇವದಾಸಿ ಪದ್ಧತಿ, ಶೂದ್ರಾತಿಶೂದ್ರರಿಗೆ ಅಕ್ಷರ ಜ್ಞಾನ ನಿಷಿದ್ದ ಮುಂತಾದ ಅನಿಷ್ಟ ಪದ್ಧತಿಗಳು ಶತಮಾನಗಳ ಕಾಲ ಮುಂದುವರಿಯಲು ಕಾರಣವಾದ ‘ಮನುಸ್ಮೃತಿ’ಯನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಸಾರ್ವಜನಿಕವಾಗಿ ಸುಟ್ಟು ಹಾಕಿದ್ದರು ಎಂದರು.
ಸ್ವಾತಂತ್ರ್ಯ ಭಾರತಕ್ಕೆ ಸಂವಿಧಾನವನ್ನು ರೂಪಿಸುವ ಸಂದರ್ಭದಲ್ಲಿ ಸಮಸಮಾಜದ ನಿರ್ಮಾಣದ ಕನಸು ಹೊತ್ತು, ಸಮಾನತೆ, ಸಹೋದರತೆ, ಭ್ರಾತೃತ್ವದ ಆಶಯದೊಂದಿಗೆ ಸಂವಿಧಾನವನ್ನು ರೂಪಿಸಿಕೊಂಡೆವು. ಈ ಸಂವಿಧಾನ ರಚನೆಗೆ ಬಾಬಾ ಸಾಹೇಬರ ಕೊಡುಗೆ ಆಗಾಧ. ಈಗಲೂ ಪರಿಸ್ಥಿತಿ ಬದಲಾಗಿಲ್ಲ. ಎಂದು ದೂರಿದರು.
ಮನು ಪ್ರಣೀತ ಭಾರತವನ್ನು ಬದಿಗೆ ಸರಿಸಿ, ಸಮಾನತೆ ಸರಿದ ಬೌದ್ಧ ತತ್ವ ಪ್ರಣಿತ, ಪ್ರಜಾತಾಂತ್ರಿಕ ಸಂವಿಧಾನವನು ನಾವು ರೂಪಿಸಿಕೊಂಡಿದ್ದನು ಸಹಿಸಿಕೊಳ್ಳದ ಶಕ್ತಿಗಳು ಇಂದು ಮತ್ತಷ್ಟು ಬಲಗೊಳ್ಳುತ್ತಿವೆ. ಬಾಬಾ ಸಾಹೇಬ್ ಅಂಬೇಡ್ಕರ್, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಯುದ್ಧವನ್ನೇ ಸಾರಿವೆ. ಹಾಗಾಗಿ ”ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಣೆ ಮಾಡಿಕೊಳ್ಳುವ ಕಾರಣಕ್ಕಾಗಿ ಬಾಬಾ ಸಾಹೇಬರು ಮನುಸ್ಮೃತಿಯನ್ನು ದಹಿಸಿದ ದಿನವಾದ ಡಿಸೆಂಬರ್ 25ರಂದು ಸಾಂಕೇತಿಕವಾಗಿ ನಾವೂ ಕೂಡ ಮನುಸ್ಮೃತಿಯನ್ನು ಸುಟ್ಟುಹಾಕುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಹೋರಾಟವನ್ನು ಮುಂದುವರಿಸೋಣ ಎಂದರು.
ಪ್ರತಿಭಟನೆಯಲ್ಲಿ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಕಲೀಲ್ ಉಲ್ಲಾ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಾದ ಸಿ.ಎಂ.ಶಿವಣ್ಣ, ಕೆರೆಹಳ್ಳಿ ಬಸವರಾಜು, ಮಹಿಳಾ ಸಂಯೋಜಕಿ ಎಂ.ಆರ್.ಪ್ರಭಾವತಿ, ಜನಶಕ್ತಿ ಸುರೇಶ್, ಸಂಘಟನಾ ಸಂಚಾಲಕರಾದ ಶಿವಕುಮಾರ್, ಸಿ.ರಂಗಸ್ವಾಮಿ, ನಂಜುಂಡಸ್ವಾಮಿ, ತಾಲೂಕು ಅಧ್ಯಕ್ಷರಾದ ರಂಗಸ್ವಾಮಿ ಮಾಡ್ರಹಳ್ಳಿ, ಶಾಂತರಾಜು, ಇದಾಯತ್ ಷರೀಫ್, ಸಾಹಿತಿ ಸಿದ್ದರಾಜು, ಆಟೋ ಉಮೇಶ್, , ಇತರರು ಭಾಗವಹಿಸಿದ್ದರು.