ಕಾವೇರಿ ನೀರು ನಿರ್ವಹಣಾ ಮಂಡಳಿ, ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಪ್ರತಿಭಟನೆ

  • ಕಾವೇರಿ ನೀರು ನಿರ್ವಹಣಾ ಮಂಡಳಿ ವಜಾ ಮಾಡಲು ಶ್ರೀನಿವಾಸಗೌಡ ಆಗ್ರಹ

ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಮಂಡಳಿ, ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಕಣ್ಣಿನ ಕಪ್ಪು ಪಟ್ಟಿ ಧರಿಸಿ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಕಣ್ಣಿಗೆ ಕಪ್ಪು ಪಟ್ಟಿ ಧರಿಸಿ ಕಾವೇರಿ ನೀರು ನಿರ್ವಹಣಾ ಮಂಡಳಿ, ಸುಪ್ರೀಂಕೋರ್ಟ್ ತೀರ್ಪು ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕಾವೇರಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 15 ದಿನಗಳವರಗೆ 4 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ, ಸುಪ್ರೀಂಕೋರ್ಟ್ ಆದೇಶ ನೀಡಿರುವುದು ಅತ್ಯಂತ ಖಂಡನೀಯವಾದದ್ದು. ಈ ತೀರ್ಪು ಕರ್ನಾಟಕದ ಪಾಲಿಗೆ ಒಂದು ಮರಣಶಾಸನವಾಗಿದೆ. ಈ ತೀರ್ಪು ಕಣ್ಣನ್ನು ಮುಚ್ಚಿಕೊಂಡು ಕುರುಡಾಗಿ ಕೊಟ್ಟಿರುವುದಾಗಿ ಭಾವಿಸಿ ನಾನು ಕಣ್ಣಿಗೆ ಕಪ್ಪು ಪಟ್ಟಿಧರಿಸಿ ಪ್ರತಿಭಟನೆ ಮಾಡಲಾಗಿದೆ ಎಂದರು.

ಕಾವೇರಿ ನೀರು ನಿರ್ವಹಣಾ ಮಂಡಳಿ ಅವರಿಗೆ ಕಣ್ಣು ಇಲ್ಲ. ಕಣ್ಣು ಇದ್ದರೆ ಇಂತಹ ಆದೇಶ ಕೊಡುತ್ತಿರಲಿಲ್ಲ. ತಿಂಗಳುಗಟ್ಟಲೇ ನೀರು ಬಿಡಿ ಎಂದರೆ ನಮಗೆ ಕುಡಿಯಲು ನೀರು ಇಲ್ಲ. ಕರ್ನಾಟಕದಲ್ಲಿ ತೀವ್ರ ಬರಗಾಲವಿದೆ. ಕುಡಿಯುಲು ನೀರಿಲ್ಲ ನಿಮಗೆ ವ್ಯವಸಾಯ ಮಾಡುವುದಕ್ಕೆ ಹೇಗೆ ನೀರು ಕೊಡುವುದು. ನೀವು ನಿಜವಾಗಲು ನ್ಯಾಯಾಧೀಶರೇ ಎಂದು ಪ್ರಶ್ನಿಸಿದರು. ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ಕೇಂದ್ರ ಸರ್ಕಾರ ವಜಾ ಮಾಡಬೇಕು ಎಂದು ಶ್ರೀನಿವಾಸಗೌಡ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಣ್ಯದಹುಂಡಿ ರಾಜು, ರವಿಚಂದ್ರಪ್ರಸಾದ್ ಕಹಳೆ, ಹೊಮ್ಮಲೋಕೇಶ್, ಆಟೋ ಲಿಂಗರಾಜು, ಮಂಗಲದ ಹೊಸೂರು ಶಿವಣ್ಣ, ಅಮಚವಾಡಿ ರಾಜು, ರಾಚಪ್ಪ, ಎ.ಎಸ್. ಸಿದ್ದರಾಜು , ಎ.ಸಿ.ಶಿವಕುಮಾರ್ ಇತರರು ಭಾಗವಹಿಸಿದ್ದರು

Leave a Reply

Your email address will not be published. Required fields are marked *