ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಶಾಲಾ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ  ಚಾಮರಾಜನಗರ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ  ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ಜಿ.ಪಂ.ಸಿಇಒ ಮೋನಾರೋತ್  ಅವರ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿಒಕ್ಕೂಟದ  ಗೌರವ ಅಧ್ಯಕ್ಷ ಬಾಲಸುಬ್ರಹ್ಮಣ್ಯಂ ಮಾತನಾಡಿ,ಶಾಲೆಗಳಿಗೆ ಭೂ ಪರಿವರ್ತನೆ ನಿಯಮವನ್ನು ಸಂಪೂರ್ಣವಾಗಿ ಕೈಬಿಡಬೇಕು.ಶಾಲೆಗಳಿಂದ ತೆರಿಗೆ ಸೆಸ್ ಮಾತ್ರ ಪಡೆಯಬೇಕು. ಭೂ ಪರಿವರ್ತನೆ ಶುಲ್ಕ ವಿಧಿಸಬಾರದು. ಕೋರ್ಟ್‌ನ ಇತ್ತೀಚಿನ ಆದೇಶದಂತೆ 15 ಮೀಟರ್‌ಗಿಂತ ಕಡಿಮೆ ಎತ್ತರದ ಕಟ್ಟಡಗಳಿಗೆ ಸರಳ ಆಗ್ನಿ ಸುರಕ್ಷತಾ ನಿಯಮಗಳನ್ನು ಅನ್ವಯಿಸಬೇಕು. ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಏಕಗವಕ್ಷಿ ಯೋಜನೆಯಡಿ ಜಾರಿಗೆ ತರಬೇಕು.ಎಲ್ಲಾ ಶಾಲೆಗಳಿಗೂ ಮಾನ್ಯತೆ ನವೀಕರಣವನ್ನು ಕನಿಷ್ಠ 10 ವರ್ಷಗಳ ಅವಧಿಗೆ ನೀಡಬೇಕು.ಆರ್.ಟಿ.ಇ ಯೋಜನೆಯಡಿ ಬಾಕಿ ಇರುವ ಸಂಪೂರ್ಣ ಹಣವನ್ನು ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು ‌
ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ  ಎಂ.ಎಲ್. ಜಿ ಲಿಂಗರಾಜು, ರುಪ್ಷಾ  ರಾಜ್ಯಾಧ್ಯಕ್ಷ ಆಲನೂರು ಲೇಪಾಕ್ಷಿ, ಗೌರವ ಅಧ್ಯಕ್ಷ ರಾಜೇಂದ್ರ,  ಖಜಾಂಚಿ ಮೋಹನ ಕುಮಾರ್, ನಿಕಟಪೂರ್ವ ಅಧ್ಯಕ್ಷ ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಕಾರ್ಯದರ್ಶಿ ಮಹೇಶ್,  ಜ್ಞಾನದೀಪ ಶಾಲೆಯ ಕಾರ್ಯದರ್ಶಿಆರ್.ಪಿ.ನಂಜುಂಡಸ್ವಾಮಿ, ಖಜಾಂಚಿ ಆಶಾ ಮೋಹನ್, ಸುನೀಲ್,  ಜಿಲ್ಲೆಯ ಖಾಸಗಿ ಶಾಲೆಯ ಮುಖ್ಯಸ್ಥ ರು,  ಶಿಕ್ಷಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *