ಕರ್ನಾಟಕ ಬಂದ್ ಬೆಂಬಲಿಸಿ ಗಡಿನಾಡು ಕನ್ನಡ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ
ಸಮಿತಿ ಆದೇಶವನ್ನು ಖಂಡಿಸಿ ಕನ್ನಡ ಚಳವಳಿಗಾರ ವಾಟಾಳ್‌ ನಾಗರಾಜ್, ಕನ್ನಡಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ ಬೆಂಬಲಿಸಿ ಗಡಿನಾಡು ಕನ್ನಡ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭವನೇಶ್ವರಿ ವೃತಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ ಪಡಿಸಿದರು.
ಈ ಸಂದರ್ಭದಲ್ಲಿ ನಿಜದ್ಧನಿಗೋವಿಂದರಾಜು ಮಾತನಾಡಿ, ರಾಜ್ಯಾದ್ಯಂತ ಕನ್ನಡ ಚಳವಳಿಗಾರ ವಾಟಾಳ್‌ನಾಗರಾಜ್‌ ಅವರ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಬೆಂಬಲಿಸಿ ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಕಾವೇರಿ ನೀರು ನಿರ್ವಹಣಾ ಸಮಿತಿ ಕೆ.ಆರ್‌ಎಸ್‌ನಿಂದ ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿರುವುದು ಅತ್ಯಂತ ಖಂಡನೀಯವಾದದ್ದು. ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶವನ್ನು ಖಂಡಿಸಿ ಹೋರಾಟ ಮಾಡುವವರನ್ನು ರಾಜ್ಯಸರ್ಕಾರ ಬಂಧಿಸುವ ಮೂಲಕ ಚಳವಳಿಯನ್ನು ಹತ್ತಿಕ್ಕಿವ ಕೆಲಸವನ್ನು ಮಾಡುತ್ತಿದೆ. ಮುಖ್ಯಮಂತ್ರಿಗಳೇ ನೀವು ಹೋರಾಟ ಮಾಡಿದರೆ ಸರ್ಕಾರ ಸುಮ್ಮನಿರಬೇಕಾ. ? ನಾವು ನೀರಿಗಾಗಿ ಹೋರಾಟ ಮಾಡಿದರೆ ನಮ್ಮ ಮೇಲೆ ಪೋಲಿಸರ ಮುಖಾಂತರ ದೌರ್ಜನ್ಯ, ದಬ್ಬಾಳಿಕೆ ಮಾಡುವುದು ನ್ಯಾಯವೇ ? ಮಾಜಿ ಮುಖ್ಯಮಂತ್ರಿ
ಬಂಗಾರಪ್ಪ ಅವರ ಸರ್ಕಾರದಲ್ಲಿ ಸುಗ್ರೀವಾಜ್ಞೆ ತಂದು ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶವನ್ನು ಧಿಕ್ಕರಿಸಿತು ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ಆದೇಶವನ್ನು ಧಿಕ್ಕರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಗೌರವ ಅಧ್ಯಕ್ಷ ಚಾ.ಸಿ.ಸಿದ್ದರಾಜು, ಜಿಲ್ಲಾಧ್ಯಕ್ಷ  ಎಂ.ನಾಗೇಶ್, ಪ್ರಧಾನ ಕಾರ್ಯದರ್ಶಿ ವಿಘ್ನೇಶ್,  ಉಪಾಧ್ಯಕ್ಷ ಕಾರ್ತಿಕ್, ಮುಖಂಡ
ಮುತ್ತಿಗೆ ಗೋವಿಂದರಾಜ, ಸದಸ್ಯರಾದ ಮಂಜು, ನಿತಿನ್, ಹರೀಶ್, ಮಹೇಶ್, ಅನಿಲ್, ಮಹೇಶ್, ಅಭಿಷೇಕ್, ಗಿರೀಶ್, ಅಕಾಶ್ ಇತರರು ಭಾಗವಹಿಸಿದ್ದರು ,

Leave a Reply

Your email address will not be published. Required fields are marked *