ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿ ಧರಣಿ: 2ನೇ ದಿನವು ಮುಂದುವರಿದ ಪ್ರತಿಭಟನೆ

ಚಾಮರಾಜನಗರ: ಭ್ರಷ್ಟಾಚಾರದಲ್ಲಿ ತೊಡಗಿ ಜೈಲು ಸೇರಿ, ಪರಿಶಿಷ್ಟ ಸಮುದಾಯದ ಕೋಟ್ಯಾಂತರ ಹಣ ಗುಳುಂ ಮಾಡಿದ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿ0ದ ವಜಾಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಘಟಕ ನಡೆಸುತ್ತಿರುವ ಧರಣಿ ಎರಡನೇ ದಿನವು ಮುಂದುವರಿಯಿತು.
ನಗರದ ಜಿಲ್ಲಾಡಳಿತ ಭವನದ ಮುಂಭಾಗ ಬಿಜೆಪಿ ಮುಖಂಡರು ಹಾಗು ಕಾರ್ಯಕರ್ತರು ಧರಣಿ ಕುಳಿತು, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಭಿತ್ತಪತ್ರಗಳನ್ನು ಪ್ರದರ್ಶನ ಮಾಡಿದರು.
ರಾಜ್ಯ ಕಾರ್ಯದರ್ಶಿ ಕೆರೆಹಳ್ಳೀ ಮಹದೇವಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ 187 ಕೋಟಿ. ರೂ. ಭ್ರಷ್ಟಾಚಾರ ಮಾಡಿರುವ ಆರೋಪ ಹೊತ್ತಿರುವ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದು ಕಾಂಗ್ರೆ ಸ್ ಪಕ್ಷ ಹಾಗು ವರಿಷ್ಠರಿಗೆ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ ಎಂದು ಒಪ್ಪಿಕೊಂಡ0ತೆ ಆಗಿದೆ. ಬಳ್ಳಾರಿ ಚುನಾವಣೆಯ ಖರ್ಚು ನಿಭಯಿಸಲು ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಡ ಜನರ ಹಣವನ್ನು ಬಳಕೆ ಮಾಡಿದ್ದಾರೆ. ಈ ಕೂಡಲೇ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಭ್ರಷ್ಟಾಚಾರದ ಆರೋಪ ಹೊತ್ತಿರುವ ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸದೇ ಹೋದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರವಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ರಾಷ್ಟ್ರೀಯ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಎಸ್ಟಿ ಮೋರ್ಚಾದ ಅಧ್ಯಕ್ಷರಾದ ಚಂದ್ರಶೇಖರ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೂರ್ಯಕುಮಾರ್, ಹೊನ್ನಹಳ್ಳಿ ಪುರುಷೋತ್ತಮ್, ಚಂದ್ರಶೇಖರ್, ಸುಂದರರಾಜ್, ಮಾರ್ಕೇಟ್‌ಕುಮಾರ್, ಬಂಗಾರನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ರಾಮಸಮುದ್ರ ಶಿವಣ್ಣ, ಆನಂದ್ ಭಗೀರಥ, ಕಿಲಗೆರೆ ಶಶಿಕುಮಾರ್, ಜಿಲ್ಲಾ ಉಪಾಧ್ಯಕ್ಷ ನಟರಾಜು, ಬುಲೆಟ್ ಚಂದ್ರು, ನಗರ ಮಂಡಲ ಅಧ್ಯಕ್ಷ ಶಿವರಾಜ್, ಬಂಗಾರನಾಯಕ, ಶಿವಣ್ಣ, ಮಹದೇವಪ್ರಸಾದ್, ವೀರೇಂದ್ರ, ಕೃಷ್ಣ, ಕೇಬಲ್ ರಂಗಸ್ವಾಮಿ, ಹೆಗ್ಗೋಠಾರ ಮಂಜು ಮೊದಲಾದವರು ಇದ್ದರು.

Leave a Reply

Your email address will not be published. Required fields are marked *