ಚಾಮರಾಜನಗರ : ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಕನ್ನಡ ಧ್ವಜ ಹಿಡಿದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯದ ಗಡಿಪ್ರದೇಶವಾದ ಚಾಮರಾಜನಗರ ಜಿಲ್ಲೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹಚಿವ ಸಂಪುಟದಲ್ಲಿ ಜಿಲ್ಲೆಯ ಶಾಸಕರುಗಳಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿದರು.
ನೂತನ ಸಚಿವ ಸಂಪುಟದಲ್ಲಿ ನಮ್ಮ ಜಿಲ್ಲೆಗೆ ಪ್ರಾತಿನಿಧ್ಯತೆ. ನೀಡಬೇಕು. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ 4 ಬಾರಿ ಗೆದ್ದಿರುವ ಸರಳ, ಸಜ್ಜನಿಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಇದ್ದಾರೆ ಅವರು ಹಿಂದುಳಿದ ವರ್ಗಗಳ ಉಪ್ಪಾರ ಸಮುದಾಯದ ಏಕೈಕ ಶಾಸಕರಾಗಿದ್ದಾರೆ. ಅಲ್ಲದೆ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಸುಪುತ್ರರು, 3 ಬಾರಿ ಶಾಸಕರಾಗಿರುವ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಇದ್ದಾರೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವರಾದ ದಿವಂಗತ ಹೆಚ್.ಎನ್.ಮಹದೇವಪ್ಪ ಅವರ ಸುಪುತ್ರ, ಶಾಸಕ ಹೆಚ್.ಎಂ.ಗಣೇಶ್ ಪ್ರಸಾದ್ ಅವರ ಮೂವರಲ್ಲಿ ಅವರ ಹಿರಿತನ, ಅನುಭವವನ್ನು ಪರಿಗಣಿಸಿ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂದು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ವರಿಷ್ಟರನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಂಡಕ್ಟರ್ ಸೋಮನಾಯಕ,
ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು,
ಜಗದೀಶ್, ಅರುಣ್ ಕುಮಾರ್ ಗೌಡ, ಹೊಂಗನೂರು ಕೆಂಪರಾಜು, ರವಿಚಂದ್ರಪ್ರಸಾದ್ ಕಹಳೆ, ರಾಚಪ್ಪ, ಅಮಚವಾಡಿ ರಾಜು, ಶಿವು, ಮುತ್ತಿಗೆ ಗೋವಿಂದ ರಾಜು, ಚಾ.ಸಿ.ಸಿದ್ದರಾಜು, ತಾಂಡವಮೂರ್ತಿ ಇತರರು ಭಾಗವಹಿಸಿದ್ದರು.