- ನೀಟ್ ಪರೀಕ್ಷೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 2 ಕೋಟಿ ಪರಿಹಾರ ನೀಡುವಂತೆ ಶ್ರೀನಿವಾಸಗೌಡ ಆಗ್ರಹ
ಚಾಮರಾಜನಗರ: ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ವಿಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಕೇಂದ್ರ
ಸರ್ಕಾರ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ ಶ್ರೀನಿವಾಸ್ ಗೌಡ ಮಾತನಾಡಿ, ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ. ಇದು ನಿಜವಾಗಲು ಅತ್ಯಂತ ಖಂಡನೀಯವಾದದ್ದು. ಇಡೀ ದೇಶಾದ್ಯಂಕ ಬಹಳ ದೊಡ್ಡ ಮಟ್ಟದಲ್ಲಿ ಹೋರಾಟ ನೀಟ್ ಪರೀಕ್ಷೆ ವಿಚಾರದಲ್ಲಿ ನಡೆಯುತ್ತಿದೆ. ನೀಟ್ ಪರೀಕ್ಷೆಯ ಪಶ್ನೆಪತ್ರಿ
ಕೆ ಮೂರು ಬಾರಿ ಸೋರಿಕೆಯಾಗಿದ್ದು, ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ನೇರಹೊಣೆ ಕೇಂದ್ರ ಸರ್ಕಾರವಾಗಿದೆ ಎಂದು ಆರೋಪಿಸಿದರು.
ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಬಹಳ ದೊಡ್ಡಮಟ್ಟದಲ್ಲಿ ಹೋರಾಟ ಮಾಡುತ್ತಿದ್ದರೂ ಸಹ ಕೇಂದ್ರ ಸರ್ಕಾರ ಇದುವರೆಗೂ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಇದರ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕಾಗಿತ್ತು. ಇನ್ನೂ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಯಾವ ಉದ್ದೇಶಕ್ಕಾಗಿ ಶಿಕ್ಷಣ ಸಚಿವರನ್ನು ಉಳಿಸಿಕೊಂಡಿದ್ದೀರಿ ? ನಿಮಗೆ ಗೌರವ ಇಲ್ಲವೇ ? ವಿದ್ಯಾರ್ಥಿಗಳ ಭವಿಷ್ಯವನ್ನು ಏನೆಂದು ತಿಳಿದುಕೊಂಡಿದ್ದೀರಿ ನೀವು? ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ವಿದ್ಯಾರ್ಥಿಗಳೇ ಕಾರಣವಾಗಿದೆ ಇಂತಹ ವಿದ್ಯಾರ್ಥಿಗಳ ಮೇಲೆ ಮಾರಣಶಾಸನ ಬರೆಯಲು ಕೇಂದ್ರ ಸರ್ಕಾರ ಹೊರಟಿದೆ ಎಂದು ದೂರಿದರು.
ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳ ಮೇಲೆ ಗೌರವ ಇದ್ದರೆ ಶಿಕ್ಷಣ ಸಚಿವರಿಂದ ರಾಜೀನಾಮೆ ಪಡೆಯಬೇಕಿತ್ತು. ಪ್ರತಿಭಟನಾನಿರತ ವಿದ್ಯಾರ್ಥಿಗಳಿಂದ ಪ್ರಧಾನಿಗಳು ಮನವಿ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಬೆಂಬಲ ನೀಡಬೇಕಿತ್ತು. ಅದನ್ನು ಬಿಟ್ಟು ಇನ್ನೂ ನಾಟಕ ಆಡುತ್ತಾ ಕುಳಿತಿದ್ದೀರಾ ? ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ನಿಮಗೆ ತಕ್ಕಪಾಠ ಕಲಿಸಿ ನಿಮ್ಮನ್ನು ಮನೆಗೆ ಕಳುಹಿಸುತ್ತಾರೆ. ನೀಟ್ ಪರೀಕ್ಷೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಕ್ಕೆ ಕನಿಷ್ಠ 2 ಕೋಟಿ ರೂ. ಪರಿಹಾರ ನೀಡಬೇಕು. ಕೇಂದ್ರ ಶಿಕ್ಷಣ ಸಚಿವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಂಡಕ್ಟರ್ ಚಾ.ಸಿ.ಸೋಮನಾಯಕ ಪಣ್ಯದಹುಂಡಿ ರಾಜು, ಆಟೋ ಲಿಂಗರಾಜು, ಪೂರ್ಣನಂದ, ಸಿ.ಎಂ.ನರಸಿಂಹಮೂರ್ತಿ,
ರವಿಚಂದ್ರಪ್ರಸಾದ್ ಕಹಳೆ, ರಾಚಪ್ಪ, ಅಮಚವಾಡಿ ರಾಜು, ಶಿವು, ಮರಿಯಾಲಹುಂಡಿ ಕುಮಾರ್, ತಾಂಡವಮೂರ್ತಿ, ವೀರಭದ್ರ ಇತರರು ಭಾಗವಹಿಸಿದ್ದರು