ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಅಭಿಮಾನಿಗಳ ಬಳಗದ ವತಿಯಿಂದ
ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಲ್ಲಿ ಡಾ.ಹೆಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಡಾ.ವಿ.ಎನ್.ಮಹದೇವಯ್ಯ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಅಭಿಮಾನಿಗಳು ಹೆಚ್.ಸಿ.ಮಹದೇವಪ್ಪ ಅವರ ಭಾವಚಿತ್ರ ಹಿಡಿದು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಹೊತ್ತು ಪ್ರತಿಭಟನೆ ನಡೆಸಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಅಭಿಮಾನಿಗಳ ಬಳಗದ ಅಧ್ಯಕ್ಷ ಡಾ.ವಿ.ಎನ್.ಮಹದೇವಯ್ಯ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಶೋಷಿತರು, ದಲಿತರ ಪರವಿದೆ, ಸಂವಿಧಾನ ರಕ್ಷಣೆ ಮಾಡುತ್ತದೆ ಎಂದು ತಲಾತಲಾಂತರಿಂದ ಕಾಂಗ್ರೆಸ್ ಪಕ್ಷವನ್ನು ಹಿಂದಿನಿಂದಲ್ಲೂ ಬೆಂಬಲಿಸಿಕೊಂಡು ಬರಲಾಗಿದೆ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಂತಹ ಸಂದರ್ಭದಲ್ಲಿ ದಲಿತರನ್ನು ತಿರಸ್ಕರಿಸುತ್ತದೆ. ಕಾಂಗ್ರೆನ್‌ನಿಂದ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತು. ಕಾಂಗ್ರೆಸ್‌ನಿಂದ ಮಹದೇವಪ್ಪ ಅವರಿಗೆ
ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಯಾವುದೇ ಶಾಸಕರ ಅಭಿಪ್ರಾಯವನ್ನು ಕೇಳದೆ ಕಾಂಗ್ರೆಸ್ ಹೈಕಮಾಂಡ್ ಎಲ್ಲೋ ಒಂದು ಕಡೆ ಕುಳಿತು ಮುಖ್ಯಮಂತ್ರಿಯನ್ನು ಘೋಷಣೆ ಮಾಡಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ
ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ ಆಗಲಿ, ಮಹದೇವಪ್ಪ ಇನ್ನಿತರ ದಲಿತ ಸಚಿವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು. ದಲ್ಲಿತ ಮುಖ್ಯಮಂತ್ರಿ ಆಗಲು ಎಲ್ಲ ಅರ್ಹತೆ, ಮಾನದಂಡ ಇದ್ದರೂ ಕೂಡ ಕಾಂಗ್ರೆಸ್ ಕಡೆಗಣಿಸಿ ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಇದನ್ನು ಕಾಂಗ್ರೆಸ್ ಸರಿಪಡಿಸದೆ ಹೋದರೆ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್‌ನ್ನು ತಿರಸ್ಕರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ದಲಿತ ಸಮುದಾಯ, ಮಹದೇವಪ್ಪ. ನಿಂತಿದ್ದರು. ನೀವು ದಲಿತರ ಬೆಂಬಲದಿಂದ 8 ವರ್ಷಗಳ ಕಾಲ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದೀರಿ. ನೀವು ಮುಂದೆ ನಿಂತು ಮಹದೇವಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಿಸಬೇಕು. ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹೆಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದ ನಗರಸಭಾ ಮಾಜಿ ಸದಸ್ಯರಾದ ಬಸವರಾಜು, ಪುಟ್ಟಸ್ವಾಮಿ, ಕಾಗಲವಾಡಿ ಚಂದ್ರು, ಪಿ.ಸಂಘಸೇನಾ, ಶಾಂತರಾಜು, ರಾಮಸಮುದ್ರ ಪ್ರಸನ್ನ ಕಮಲ್‌ನಾಗರಾಜು, ಗಣೇಶ್ ಪ್ರಸಾದ್, ನಾಗರತ್ನ, ಶಿವನಾಗಣ್ಣ, ಚಿನ್ನಮ್ಮ, ಭಾಗ್ಯಮ್ಮ ಇತರರು ಭಾಗವಹಿಸಿದ್ದರು.