- ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡಲು ಮಹಾದೇವಸ್ವಾಮಿ ಆಗ್ರಹ
ಚಾಮರಾಜನಗರ: ಬಿಡದಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಶಾಂತಿಯುತ ಪ್ರತಿಭಟನಾನಿರತರ ಮೇಲೆ ಪೊಲೀಸ್ ದೌರ್ಜನ್ಯ, ದಬ್ಬಾಳಿಕೆ ಹಾಗೂ ಲಾಠಿ ಪ್ರಹಾರ ಖಂಡಿಸಿ. ರಾಜ್ಯ ಕಬ್ಬು ಬೆಳೆಗಾರ ಸಂಘದ ಜಿಲ್ಲಾ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಜಯಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿ, ರಾಜ್ಯ ಸರ್ಕಾರ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ರಾಜ್ಯ ಕಬ್ಬು ಬೆಳೆಗಾರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಮೂಕಳ್ಳಿಮಹದೇವಸ್ವಾಮಿ ಮಾತನಾಡಿ, ಸೋಮವಾರ ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಬೈರಮಂಗಲ, ಮಂಡಲಹಳ್ಳಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಉದ್ದೇಶಿತ ಹೈಟೆಕ್ ‘ಐಟಿ/ಎಐ ಟೌನ್‌ಶಿಪ್ ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಬಿಡದಿ ಭೂ ಸ್ವಾಧೀನ ಹೋರಾಟ ಸಮಿತಿಯ ನೇತೃತ್ವದಲ್ಲಿ ಕಳೆದ 460ಕ್ಕೂಹೆಚ್ಚು ದಿನಗಳಿ ನಿರಂತರವಾಗಿ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ನಿನ್ನೆ ಜಂಟಿ ಅಳತೆ ಸಮಿತಿಯ ಕಂದಾಯ ಅಧಿಕಾರಿಗಳು ರೈತರ ಅನುಮತಿ ಪಡೆಯದೇ ಏಕಪಕ್ಷೀಯವಾಗಿ ಮಂಡಲಹಳ್ಳಿ ಗ್ರಾಮದಲ್ಲಿ ಭೂ ಸರ್ವೇ ಕಾರ್ಯ ನಡೆಸಲು ಬಂದಾಗ ಪ್ರತಿಭಟನಾ ನಿರತ ರೈತರು, ತಮ್ಮ ಜೀವನಾಧಾರವಾಗಿರುವ ಜಮೀನನ್ನು ಉಳಿಸಿಕೊ ಉಳಿಸಿಕೊಳ್ಳಲು ಮಹಿಳೆಯರು ಮತ್ತು ಹಿರಿಯ ರೈತರು ಸೇರಿದಂತೆ ನೂರಾರು ಹೋರಾಟಗಾರರು ಅಧಿಕಾರಿಗಳ ವಾಹನವನ್ನು ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಜಮಾಯಿಸಿದ್ದ ಪೊಲೀಸ್ ಸಿಬ್ಬಂದಿಯು ಪ್ರತಿಭಟನಾ ನಿರತರನ್ನು ಚದುರಿಸುವ ನೆಪದಲ್ಲಿ ಲಾಟಿಚಾರ್ಜ್ ಮಾಡಿ ವಯೋವೃದ್ಧರು ಮತ್ತು ಮಹಿಳೆಯರ ಮೇಲೂ ದಯೆಯಿಲ್ಲದೆ ಬಲಪ್ರಯೋಗ ಹಾಗೂ ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರ ಈ ದೌರ್ಜನ್ಯ, ದಬ್ಬಾಳಿಕೆ ಖಂಡನೀಯ. ಹಲವು ರೈತರು ಹಾಗೂ ಮಹಿಳಾ ಪ್ರತಿಭಟನಾಕಾರರು ಗಾಯಗೊಂಡಿದ್ದು, ಅಸ್ಪತ್ರೆಗೆ ಸೇರಿಸಲಾಗಿದೆ. ಹೋರಾಟಗಾರರನ್ನು ಬಲವಂತವಾಗಿ ಬಂಧಿಸಲು ಯತ್ನಿಸಲಾಗಿದೆ. ಹಲವರ ಮೇಲೆ ಪೊಲೀಸ್ ಮೊಕದ್ದಮೆ ದಾಖಲಾಗಿಸಿರುವುದು ಖಂಡನೀಯವಾದದ್ದು ಎಂದರು.
ತಲತಲಾಂತರದಿಂದ ನಂಬಿ ಬದುಕಿರುವ ಲಕ್ಷಾಂತರ ತೆಂಗು, ಮಾವಿನ ಮರಗಳುಳ್ಳ ಬೆಂಗಳೂರಿಗೆ ದಿನನಿತ್ಯ ಲಕ್ಷಾಂತರ ಲೀಟರ್ ಹಾಲು ಪೂರೈಸುವ ಈ ಫಲವತ್ತಾದ ಕೃಷಿ ಭೂಮಿಯ ಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯಬೇಕು. ರಾಜ್ಯದಲ್ಲಿ ಮಳೆ ಇಲ್ಲದ ಕಾರಣ ಬರಗಾಲ ಎಂದು ಘೋಷಣೆ ಮಾಡಿ ರೈತರ ಸಾಲ ಮನ್ನಾ ಮಾಡ ಬೆಳೆದಂತಹ ಬೆಳೆಗಳಿಗೆ ಸೂಕ್ತ ಪರಿಹಾರ ಕೊಡಬೇಕು. ಶಾಂತಿಯುತವಾಗಿ ಹಕ್ಕೊತ್ತಾಯ ಮಂಡಿಸುತ್ತಿದ್ದ ಅನ್ನದಾತರ ಮೇಲೆ ಮತ್ತು ಮಹಿಳೆಯರ ಮೇಲೆ ಅಮಾನವೀಯವಾಗಿ ಲಾಠಿ ಬೀಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಬೇಕು. ಪ್ರತಿಭಟನೆಯ ವೇಳೆ ವಶಕ್ಕೆ ಪಡೆದಿರುವ ಎಲ್ಲಾ ರೈತ ಮುಖಂಡರನ್ನು ಮತ್ತು ಹೋರಾಟಗಾರರನ್ನು ಬೇಷರತ್ತಾಗಿ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಮಹಾದೇವಸ್ವಾಮಿ ಒತ್ತಾಯಿಸಿದರು.
ಪ್ರತಿಭಟನೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಉಡಿಗಾಲ ರೇವಣ್ಣ, ಜಿಲ್ಲಾ ಉಪಾಧ್ಯಕ್ಷ ಮೂಡಲಪುರ ಶಿವಮೂರ್ತಿ, ತಾಲೂಕು ಅಧ್ಯಕ್ಷ ನಂಜೇದೇವನಪುರ ಸತೀಶ್, ಯಳಂದೂರು ತಾಲೂಕು ಅಧ್ಯಕ್ಷ ಗೌಡಹಳ್ಳಿಷಡಕ್ಷರಸ್ವಾಮಿ, ಅಮಚವಾಡಿ ವಿಜಯಕುಮಾರ್, ಯರಿಯೂರು ಮಹೇಶ್, ಮೆಳ್ಳಹಳ್ಳಿ ಚಂದ್ರಶೇಖರ್ ಮೂರ್ತಿ, ಶ್ರೀಕಂಠಮೂರ್ತಿ, ವೀರನಪುರ ನವೀನ್, ನಂಜಪುರ ಸಿದ್ದಪ್ಪ, ಬಿಸಲವಾಡಿ ನಾಗರಾಜು ಭಾಗವಹಿಸಿದ್ದರು.