ಡಿ. 21ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

  • ಒಟ್ಟು 61161 ಮಕ್ಕಳಿಗೆ ಲಸಿಕೆ ನೀಡುವ ಗುರಿ : ಡಾ. ಎಸ್. ಚಿದಂಬರ
ಚಾಮರಾಜನಗರ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ  ಡಿಸೆಂಬರ್ 21ರಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಬೂತ್‍ಗಳಲ್ಲಿ ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುತ್ತದೆ.  

ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಮೊದಲನೇ ದಿನ ಅಂದರೆ ಡಿಸೆಂಬರ್ 21ರಂದು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಗ್ರಾಮಾಂತರ ಪ್ರದೇಶಗಳಲ್ಲಿ ಎರಡನೇ ಮತ್ತು ಮೂರನೇ ದಿನ ಮನೆ ಮನೆಗೆ ಭೇಟಿ ನೀಡಲಾಗುತ್ತದೆ. ಪಟ್ಟಣ ಪ್ರದೇಶದಲ್ಲಿ ಎರಡನೆ, ಮೂರನೇ ದಿನ ಹಾಗೂ ನಾಲ್ಕನೇ ದಿನವು ಸಹ ಮನೆ ಮನೆ ಗೆ ಭೇಟಿ ನೀಡುವ ಲಸಿಕಾ ಕಾರ್ಯಕ್ರಮ ಕೈಗೊಳ್ಳಲಾಗುತ್ತದೆ. ಪಟ್ಟಣ ಪ್ರದೇಶದಲ್ಲಿ ಒಟ್ಟು 41715 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 208596 ಮನೆಗಳ ಭೇಟಿ ನೀಡಲಿದ್ದು, ಒಟ್ಟು ಮನೆಗಳ ಭೇಟಿ ಸಂಖ್ಯೆ 250311 ಆಗಿದೆ.

ಜಿಲ್ಲೆಯಲ್ಲಿ 61161 ಮಕ್ಕಳಿಗೆ ಲಸಿಕೆ ಹಾಕುವ ಅಂದಾಜು ಮಾಡಲಾಗಿದೆ. ಚಾಮರಾಜನಗರ ತಾಲ್ಲೂಕಿನಲ್ಲಿ 20480 ಮಕ್ಕಳಿಗೆ ಲಸಿಕೆ ನೀಡಲಿದ್ದು, ಈ ಪೈಕಿ ನಗರ ಪ್ರದೇಶದವರು 6801, ಗ್ರಾಮೀಣ ಪ್ರದೇಶದವರು 13679 ಮಕ್ಕಳಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 12404 ಮಕ್ಕಳಿಗೆ ಲಸಿಕೆ ನೀಡಲಿದ್ದು, ಈ ಪೈಕಿ ನಗರ ಪ್ರದೇಶದವರು 1963, ಗ್ರಾಮೀಣ ಪ್ರದೇಶದವರು 10441 ಮಕ್ಕಳಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನಲ್ಲಿ 10401 ಮಕ್ಕಳಿಗೆ ಲಸಿಕೆ ನೀಡಲಿದ್ದು, ಈ ಪೈಕಿ ನಗರ ಪ್ರದೇಶದವರು 4028, ಗ್ರಾಮೀಣ ಪ್ರದೇಶದವರು 6373 ಮಕ್ಕಳಿದ್ದಾರೆ. ಹನೂರು ತಾಲ್ಲೂಕಿನಲ್ಲಿ 12241 ಮಕ್ಕಳಿಗೆ ಲಸಿಕೆ ನೀಡಲಿದ್ದು, ಈ ಪೈಕಿ ನಗರ ಪ್ರದೇಶದವರು 926, ಗ್ರಾಮೀಣ ಪ್ರದೇಶದವರು 11315 ಮಕ್ಕಳಿದ್ದಾರೆ.  ಯಳಂದೂರು ತಾಲ್ಲೂಕಿನಲ್ಲಿ 5635 ಮಕ್ಕಳಿಗೆ ಲಸಿಕೆ ನೀಡಲಿದ್ದು, ಈ ಪೈಕಿ ನಗರ ಪ್ರದೇಶದವರು 511 ಗ್ರಾಮೀಣ ಪ್ರದೇಶದವರು 5124 ಮಕ್ಕಳಿದ್ದಾರೆ.  

ಒಟ್ಟು ಜಿಲ್ಲೆಯಲ್ಲಿ 612 ಪಲ್ಸ್ ಪೋಲಿಯೋ ಬೂತ್‍ಗಳನ್ನು ತೆರೆಯಲಾಗಿದ್ದು, ಇದರಲ್ಲಿ ನಗರ ಪ್ರದೇಶಗಳಲ್ಲಿ 93 ಬೂತ್‍ಗಳು, ಗ್ರಾಮೀಣ ಪ್ರದೇಶದಲ್ಲಿ 519 ಬೂತ್‍ಗಳನ್ನು ತೆರೆಯಲಾಗುತ್ತಿದೆ. ಚಾಮರಾಜನಗರ ತಾಲ್ಲೂಕಿನಲ್ಲಿ 189, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 156, ಕೊಳ್ಳೇಗಾಲ ತಾಲ್ಲೂಕು 90, ಹನೂರು ತಾಲ್ಲೂಕು 133 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 44 ಬೂತ್‍ಗಳನ್ನು ತೆರೆಯಲಾಗಿದೆ. 

ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಜಿಲ್ಲೆಯಾದ್ಯಂತ 130 ಮೇಲ್ವಿಚಾರಕರನ್ನು ಹಾಗೂ 2528 ಲಸಿಕಾ ಕಾರ್ಯಕರ್ತರನ್ನು ನಿಯೋಜಿಸಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಒಟ್ಟು 25 ಟ್ಯಾನ್ಸಿಟ್ ಹಾಗೂ 4 ಮೊಬೈಲ್ ತಂಡಗಳನ್ನು ರಚಿಸಲಾಗಿದೆ.

ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಭಾರತದಲ್ಲಿ 1995ರಿಂದಲೂ ಒಂದು ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ನಡೆಸುತ್ತಿದ್ದು, ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದ ಎಲ್ಲಾ ಮಕ್ಕಳಿಗೂ ಈ ಹಿಂದೆ ಎμÉ್ಟೀ ಬಾರಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿದ್ದರೂ ಕೂಡ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು. ಪೆÇೀಷಕರು, ಚುನಾಯಿತ ಪ್ರತಿನಿಧಿಗಳು, ಧಾರ್ಮಿಕ ಮತ್ತು ಸಮುದಾಯದ ಮುಖಂಡರು, ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಯ ಪದಾಧಿಕಾರಿಗಳು ಸಹಕಾರ ನೀಡಿ ತಮ್ಮ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *