- ಉಮ್ಮತ್ತೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾವಾರ್ಷಿಕೋತ್ಸವ ಸಮಾರಂಭ
ಚಾಮರಾಜನಗರ: ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು ಎಂದು ಕಲಾವಿದ ಉಮ್ಮತ್ತೂರು ಬಸವರಾಜು ಕಿವಿಮಾತು ಹೇಳಿದರು.
ತಾಲೂಕಿನ ಉಮ್ಮತ್ತೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,
ಕಾರ್ಯಕ್ರಮದಲ್ಲಿ
ಸರ್ಕಾರ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಪುಸ್ತಕ, ಸಮವಸ್ತ್ರ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಉಚಿತ ಸೌಲಭ್ಯಗಳು ಸಿಗುತ್ತಿದ್ದು, ಪೋಷಕರು ಇದರ ಸದುಪಯೋಗ ಪಡೆಯಬೇಕು. ಕಾನ್ವೆಂಟ್ ವ್ಯಾಮೋಹದಿಂದ ಹೊರಬರಬೇಕು. ಸರ್ಕಾರಿ ಶಾಲೆಗಳಲ್ಲಿ ಓದಿದ ಅನೇಕ ಮಹನೀಯರು ದೇಶದ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಇಲ್ಲಿ ನುರಿತ ಶಿಕ್ಷಕರಿದ್ದಾರೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು’ ಎಂದು ಸಲಹೆ ನೀಡಿದರು
‘ಖಾಸಗಿ ಶಾಲೆಗಳ ಪೈಪೋಟಿ ನಡುವೆ ಸರ್ಕಾರಿ ಶಾಲೆಗಳು ಬಲಗೊಳ್ಳುತ್ತಿವೆ.ಸಮಾನ ಶಿಕ್ಷಣದ ಪರಿಕಲ್ಪನೆ ಉಳಿಯಲು, ಪ್ರತಿಯೊಬ್ಬರಿಗೂ ಉಚಿತ ಶಿಕ್ಷಣ ಸಿಗಲು ಸರ್ಕಾರಿ ಶಾಲೆಗಳನ್ನು ಉಳಿಸಿ ಅಭಿವೃದ್ಧಿಪಡಿಸಬೇಕು. ಈ ಕಾರ್ಯಕ್ಕೆ ಸಮಾಜ ಮತ್ತು ಸಮುದಾಯದ ಸಹಕಾರ ಅಗತ್ಯ. ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಸರ್ಕಾರ ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಒತ್ತಾಯಿಸಿದರು.
ಮುಖ್ಯ ಶಿಕ್ಷಕಿ ಎನ್ .ಲತಾ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಬಿ.ಸೋಮು ಕಾರ್ಯಕ್ರಮ ಉದ್ಘಾಟಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಶಿವಮಲ್ಲಪ್ಪ ಡಾ.ರವಿಕಿರಣ್, ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ನಾಗೇಂದ್ರಸ್ವಾಮಿ, ಡೈರಿ ಅಧ್ಯಕ್ಷ ಜೆ.ಸಿದ್ದಪ್ಪ, ಚಿತ್ರನಟ ಗಾಳೀಪುರ ಮಂಜು, ಪೋಷಕ ಪ್ರತಿನಿಧಿ ಸಿದ್ದರಾಜು, ಶಿಕ್ಷಕ ಸಯೋಜಕ ರೇವಣ್ಣ, ಬಿಆರ್‌ಪಿ ಹವಿತ, ಸಿಆರ್‌ಪಿ ವಿಯಕುಮಾರ್, ಎಸ್‌ಡಿ ಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮ ನಂತರ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.–++++++++
ಚಿತ್ರ: ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಬಿ.ಸೋಮು ಉದ್ಘಾಟಿಸಿದರು