ಕ್ವಿಟ್ ಇಂಡಿಯಾ ಚಳವಳಿ ಒಂದು ಐತಿಹಾಸಿಕ ಹೋರಾಟ : ಎಡಿಸಿ ಜವರೇಗೌಡ

  • ಕ್ವಿಟ್ ಇಂಡಿಯಾ ಚಳುವಳಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಗಾಂಧಿವಾದಿ ಸಿ.ರಂಗಸ್ವಾಮಿರವರ ಸ್ಮರಣೆ

ಚಾಮರಾಜನಗರ: ಮಹಾತ್ಮಗಾಂಧಿಜೀ ಅವರ ನೇತೃತ್ವದಲ್ಲಿ ಆರಂಭವಾದ ಕ್ವಿಟ್ ಇಂಡಿಯಾ ಚಳುವಳಿಯು ಭಾರತ ಸ್ವಾತಂತ್ರ್ಯ ಸಂಗ್ರಾಮದ ಒಂದು ಐತಿಹಾಸಿಕ ಹೋರಾಟ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.
  ನಗರದ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ವತಿಯಿಂದ ಕ್ವಿಟ್ ಇಂಡಿಯಾ ಚಳುವಳಿ ದಿನಾಚರಣೆ, ಕ್ವಿಟ್ ಇಂಡಿಯಾ ಚಳುವಳಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಗಾಂಧಿವಾದಿ ಸಿ.ರಂಗಸ್ವಾಮಿರವರ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗಾಂಧೀಜಿಯವರ ಮಾಡು ಇಲ್ಲವೇ ಮಡಿ ಎನ್ನುವ ಕರೆಯು ದೇಶದ ಜನರಲ್ಲಿ ಹೊಸ ಕ್ರಾಂತಿಯ ಕಿಚ್ಚು ಹೊತ್ತಿಸಿತು ಸ್ವಾತಂತ್ರ್ಯ ಚಳುವಳಿ ಜನರ ಸಾಮಾನ್ಯರ ಚಳವಳಿಯಾಯಿತು. ಅಂತಹ ಐತಿಹಾಸಿಕ ಹೋರಾಟದಲ್ಲಿ ಚಾ.ರಂ.ಶ್ರೀನಿವಾಸಗೌಡ ಅವರ ತಂದೆ ರಂಗಸ್ವಾಮಿ ಇತರ ಸಹಭಾಗಿತ್ವದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿರುವುದು ಬಹಳ ಹೆಮ್ಮೆಯ ವಿಚಾರವಾಗಿದೆ ಇಂತಹ ಸ್ವಾತಂತ್ರ್ಯ ಹೋರಾಟಗಾರ ಸ್ಮರಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಹರವೆ ವಿರಕ್ತ ಮಠದ ಸರ್ಪಭೂಷಣಸ್ವಾಮೀಜಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಣೆ ಮಾಡುವುದು ಪ್ರಮುಖವಾದದ್ದು, ಆಗಸ್ಟ್ 8, 1942ರಂದು ಆರಂಭವಾದ ಕ್ವಿಟ್ ಇಂಡಿಯಾ ಚಳವಳಿಯು ಬ್ರಿಟಿಷರ ಅಡಳಿತವನ್ನು ಅಂತ್ಯಗೊಳಿಸಲು ಕರೆ ನೀಡಿದ ಐತಿಹಾಸಿಕ ಹೋರಾಟವಾಗಿದೆ. ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಕರೆಯು ಕೋಟ್ಯಂತರ ಭಾರತೀಯರನ್ನು ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮಕುವಂತೆ ಮಾಡಿತು ಎಂದರು.
  ಸನ್ಮಾನ ಸ್ವೀಕರಿಸಿದ ಜಿ.ಪಂ. ಮಾಜಿ ಅಧ್ಯಕ್ಷ.ಎಂ.ರಾಮಚಂದ್ರ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಫಲವಾಗಿ ನಾವೆಲ್ಲರೂ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನೆಮ್ಮದಿ ಜೀವನ ಸಾಗಿಸುತಿದ್ದೇವೆ. ಪ್ರಸ್ತುತ ದಿನಗಳಲ್ಲಿ ಯುವ ಜನಾಂಗದಲ್ಲಿ ಗಾಂಧೀಜಿಯವರ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು.
ವಿದ್ಯಾರ್ಥಿ ಜೀವನದಲ್ಲಿ ಹೋರಾಟಗಾರರನ್ನು ಮರೆಯುವ ಕೆಲಸ ಆಗುತ್ತಿದೆ ಆಗಾಗಿ ಪಠ್ಯಪುಸ್ತಕಗಳಲ್ಲಿ
ಸ್ವಾತಂತ್ರ್ಯ ಹೋರಾಟಗಾರರು, ಮಹಾರಾಜರು, ಧರ್ಮ, ಸಂಸ್ಕೃತಿ ಇರುತ್ತಿತು. ಇಂಗ್ಲಿಷ್ ವ್ಯಾಮೋಹಕ್ಕೆ
ಒಳಗಾಗಿ ಅಂತಹ ಪಠ್ಯಗಳನ್ನು ಓದುವ ಅವಕಾಶ ಕಳೆದುಕೊಳ್ಳಲಾಗುತ್ತಿದೆ. ಸರ್ಕಾರಗಳು ಪಠ್ಯದ
ಮೂಲಕ ಇತಿಹಾಸವನ್ನು ತಿಳಿಸುವ ಕೆಲಸ ಮಾಡಬೇಕಿದೆ ಎಂದು ಒತ್ತಾಯಿಸಿದರು.
   ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ಪಾಪು ಮಾತನಾಡಿ, ಜನಪ್ರತಿನಿಧಿಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಅರಿವು ಇಲ್ಲ. ಸ್ವಾತಂತ್ರ್ಯ ಹೋರಾಟದ ವಂದೇ ಮಾತರಂ ಕೆಲವರ ನಾವು ಹಾಡುವುದಿಲ್ಲ ಅಂತಾರೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿಯನ್ನು ಕೊಟ್ಟದ್ದು ವಂದೇ ಮಾತರಂ  ಅದನ್ನ ಹಾಡಲೇಬೇಕು ಎಂದರು.
ಸನ್ಮಾನ: ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ಪಾಪು, ತಾ.ಪಂ.ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಸುರೇಶ್‌ಋಗ್ವೇದಿ ವಿಚಾರ ಮಂಡನೆ ಮಾಡಿದರು. ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಪ್ರಾಸ್ತಾವಿಕ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಶಾ.ಮುರಳಿ, ಗಣಿ ಉದ್ಯಮಿ ಶ್ರೀನಿಧಿಕುದರ್, ಚಾ.ವೆಂ.ರಾಜ್‌ ಗೋಪಾಲ್, ಪಣ್ಯದಹುಂಡಿರಾಜು, ಶಿವಣ್ಣ ಹೊಸೂರು, ರವಿಚಂದ್ರಪ್ರಸಾದ್, ಲೋಕೇಶ್, ಲಿಂಗರಾಜು ಇತರರು.

Leave a Reply

Your email address will not be published. Required fields are marked *