ಚಾಮರಾಜನಗರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಚಾಮರಾಜನಗರ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಬಡಗಲಮೋಳೆಯ ಆರ್. ಚೇತನ್‌ಕುಮಾರ್ ಅವರನ್ನು ಕೆಪಿಸಿಸಿ ರಾಜ್ಯ ಹಿಂದುಳಿಗಳ ವರ್ಗಗಳ ಅಧ್ಯಕ್ಷ ಎಸ್. ಮಧು ಬಂಗಾರಪ್ಪ ಅವರು ನೇಮಕ ಮಾಡಿ ಅದೇಶದ ಹೊರಡಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ರವರ ಅನುಮೋದನೆ ಮೇರೆಗೆ ಹಾಗೂ ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಶಿಫಾಸ್ಸಿನ ಮೇರೆಗೆ ಚೇತನ್ ಕುಮಾರ್ ಆರ್ ಆದ ನಿಮ್ಮನ್ನು ನೇಮಕ ಮಾಡಲಾಗಿದ್ದು, ಪಕ್ಷದ ಹಾಗೂ ರಾಜ್ಯ-ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ತಾವು ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.