
ಚಾಮರಾಜನಗರ: ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣರವರ 65ನೇ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿಗಳ ಬಳಗದ ವತಿಯಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಹಾಗೂ 65 ಗಿಡ ನೆಡುವ ಕಾರ್ಯಕ್ರಮವನ್ನು ಜು.31 ಶುಕ್ರವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ನಗರದ ರೋಟರಿ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿರವರಗೆ ರಸ್ತೆಯ 2 ಬಂದಿಗಳಲ್ಲಿ 65 ಗಿಡಗಳ ನೆಡುವ ಕಾರ್ಯಕ್ರಮ, ರೋಟರಿ ಸಂಸ್ಥೆ ನಡೆಸುತ್ತಿರುವ ಡಯಾಲಿಸಸ್ ಕೇಂದ್ರಕ್ಕೆ ಧ್ರುವನಾರಾಯಣ್ ನೆನಪಿನಲ್ಲಿ ಒಂದು ದಿನದ ವೆಚ್ಚವನ್ನು ನೀಡುವುದು, ಅನೀಮಿಯಾ ತಪಾಸಣಾ ಶಿಬಿರ ಹಾಗೂ ಔಷಧಿ ವಿತರಣೆ ಮಾಡಲಾಗುತ್ತದೆ.ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಿಕೊಡುವಂತೆ ಆರ್. ಧ್ರುವನಾರಾಯಣ ಅಭಿಮಾನಿ ಬಳಗ ಅಧ್ಯಕ್ಷ ಕಾಗಲವಾಡಿ ಚಂದ್ರು ಪತ್ರಿಕಾ ಪ್ರಕಟಣೆ ಮನವಿ ಮಾಡಿದ್ದಾರೆ.