ಚಾಮರಾಜನಗರ, ಅಕ್ಟೋಬರ್ 14 (ಕರ್ನಾಟಕ ವಾರ್ತೆ):- ಚಾಮರಾಜನಗರ ದಸರಾ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ರೈತ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 16 ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಿಂದ ಪಚ್ಚಪ್ಪ ವೃತ್ತ ಮಾರ್ಗವಾಗಿ ಡಾ. ಬಿ.ಆರ್ ಅಂಬೇಡ್ಕರ್ ಭವನದವರೆಗೆ ಇಲಾಖಾ ಸ್ತಬ್ಧಚಿತ್ರಗಳು, ಎತ್ತಿನ ಗಾಡಿಗಳು ಹಾಗೂ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. ಬಳಿಕ ವೇದಿಕೆ ಕಾರ್ಯಕ್ರಮವಿದ್ದು, ಕೃಷಿ ವಸ್ತುಪ್ರದರ್ಶನದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಪಾರಂಪರಿಕ ಕೃಷಿ ವಸ್ತುಗಳ ಪ್ರದರ್ಶನ, ಸಾವಯವ ಉತ್ಪನ್ನಗಳು, ಮಣ್ಣು ಆರೋಗ್ಯ ಪ್ರಯೋಗಾಲಯ, ರೇμÉ್ಮ ಕೃಷಿ, ಅಲಂಕಾರಿಕ ಮೀನುಗಳ ಪ್ರದರ್ಶನ ಹಾಗೂ ಇತರೆ ವಸ್ತು ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ರೈತರು ರೈತ ದಸರಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.