ಚಾಮರಾಜನಗರ:ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ರಾಮಸಮುದ್ರ ಶಿವು (ಶಿವಣ್ಣ) ನೇಮಕಗೊಂಡಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷ ಸಿ.ಎಸ್. ನಿರಂಜನಕುಮಾರ್ ಆದೇಶ ಪ್ರತಿ ವಿತರಿಸಿ, ಶಿವಣ್ಣ ಅವರು ಪಕ್ಷದಲ್ಲಿನಗರ ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷರು,ನಗರ ಮಂಡಲ ಪ್ರಧಾನ ಕಾರ್ಯದರ್ಶಿ , ಜಿಲ್ಲಾ ಮಾಧ್ಯಮ ಸಹ ಪ್ರಮುಖ ಸೇವೆ ಸಲ್ಲಿಸಿದ್ದು, ಸಾಕಷ್ಟು ಅನುಭವ ಹೊಂದಿದ್ದಾರೆ. ಅವರು ಎಸ್ ಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಮವಾಗಿ ಸೇವೆ ಸಲ್ಲಿಸುವ ಮೂಲಕ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಕೋರಿದರು.
ಕಾರ್ಯಕ್ರಮದಲ್ಲಿರಾಜ್ಯ ವಕ್ತಾರ ಅಶ್ವಥ್ ನಾರಾಯಣ, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಮಾಜಿ ಶಾಸಕರಾದ ಬಾಲರಾಜು, ಕೇಂದ್ರ ಬರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ರಾಷ್ಟ್ರೀಯ ಓಬಿಸಿ ಕಾರ್ಯಕಾರಿ ಸದಸ್ಯ ನೂರೊಂದು ಶೆಟ್ಟಿ, ಚುಡಾ ಮಾಜಿ ಅಧ್ಯಕ್ಷ ರಾದ ಶಾಂತಮೂರ್ತಿ , ಎಸ್. ಬಾಲಸುಬ್ರಹ್ಮಣ್ಯಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಹೊನ್ನೂರು ಮಹದೇವ ಸ್ವಾಮಿ, ಮೂಡ್ನಾಕೂಡು ಪ್ರಕಾಶ್ ಇತರರು ಹಾಜರಿದ್ದರು