ಗಮನ ಸೆಳೆದ ರಂಗೋಲಿ ಸ್ಪರ್ಧೆ; ಸಂಸ್ಕೃತಿ ವಿನಿಮಯಕ್ಕೆ ಸಹಕಾರಿ: ದಲಿತ್ ರಾಜ್

  • ಸಂಸ್ಕೃತಿ ವಿನಿಮಯಕ್ಕೆ ಸಹಕಾರಿ: ದಲಿತ್ ರಾಜ್
  • ಇಮ್ಮಾನುವೇಲ್ ಕ್ರಿಶ್ಚಿಯನ್ ಪಬ್ಲಿಕ್ ಶಾಲೆಯಲ್ಲಿ ಪೋಷಕರಿಗೆ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆ ಗಮನ ಸೆಳೆಯಿತು   

ಚಾಮರಾಜನಗರ: ನಾಡಿನ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸುವಲ್ಲಿ ಹಾಗೂ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಲು ಇಂತಹ ರಂಗೋಲಿ ಸ್ಪರ್ಧೆ ಸಹಕಾರಿಯಾಗಿದೆ ಎಂದು ವಕೀಲರಾದ  ದಲಿತ್ ರಾಜ್ ಹೇಳಿದರು.
ನಗರದ ಇಮ್ಮಾನುವೇಲ್ ಕ್ರಿಶ್ಚಿಯನ್ ಪಬ್ಲಿಕ್ ಶಾಲೆಯಲ್ಲಿ ಪೋಷಕರಿಗೆ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತ ರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಇಮ್ಮಾನುವೇಲ್ ಕ್ರಿಶ್ಚಿಯನ್ ಪಬ್ಲಿಕ್ ಶಾಲೆಯು ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಪಠ್ಯೇತರ ಚಟುವಟಿಕೆಗಳು ಆಯೋಜಿಸಿಕೊಂಡು ಬರುತ್ತಿದ್ದು ಅಲ್ಲದೆ ಇಂದು ಪೋಷಕರಿ ರಂಗೋಲಿ ಸ್ಪರ್ಧೆ ಅಯೋಜಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು ಇದು,  ನಾಡಿನ‌ ಸಂಸ್ಕೃತಿಯನ್ನು ಉಳಿಸಿ- ಬೆಳೆಸಲು ಸಹಕಾರಿಯಾಗಿದೆ ಎಂದರು.
ಪೋಷಕರ ಸ್ನೇಹಿ ಶಾಲೆ: ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಿಆರ್ ಪಿ ಶಿವಕುಮಾರ್ ಮಾತನಾಡಿ,  ಇಮ್ಮಾನುವೇಲ್ ಕ್ರಿಶ್ಚಿಯನ್ ಪಬ್ಲಿಕ್ ಶಾಲೆಯು ಡೊನೇಷನ್ ತೆಗೆದುಕೊಳ್ಳದೆ ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳನ್ವಯ ಪ್ರವೇಶ ಶುಲ್ಕ ವನ್ನು ಪಡೆದು ಗಡಿಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಕೊಡುವ ಕೆಲಸ ಮಾಡುವುದರೊಂದಿಗೆ  ಪೋಷಕರಿಗೂ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪೋಷಕರ ಸ್ನೇಹಿ ಶಾಲೆಯಾಗಿ ನಡೆಯುತ್ತಿದೆ ಎಂದರು.
ಶಾಲೆಯ ಮುಖ್ಯಸ್ಥೆ ಜೋಸ್ನಾ  ಅಂಥೋಣಿ ಮಾತನಾಡಿ, ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಕೊಡಲು ಶಾಲೆ ಆರಂಭಿಸಲಾಗಿದೆ.  ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳು, ಪೋಷಕರಲ್ಲಿ ಸಾಹಿತ್ಯ, ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಸದುದ್ದೇಶದಿಂದ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಫಾಸ್ಟರ್   ಅನಿಲ್ ಕುಮಾರ್, ಸುರೇಶ್, ಶಿಕ್ಷಕರು, ಪೋಷಕರು ಹಾಜರಿದ್ದರು.

Leave a Reply

Your email address will not be published. Required fields are marked *