ಚಾಮರಾಜನಗರ: ಪಡಿತರ ಚೀಟಿದಾರರು ತಮಗೆ ವಿತರಣೆಯಾಗುವ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ದಾಖಲಾಗುತ್ತಿರುವುದರಿಂದ ಅಂತಹ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದೆಂದು ಆಹಾರ ಇಲಾಖೆ ತಿಳಿಸಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿ ಮಾಹೆ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿಯ ಫಲಾನುಭವಿಗಳಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ ಯಂತೆ ಸರ್ಕಾರ ನಿಗದಿಪಡಿಸಿರುವ ಪ್ರಮಾಣದಂತೆ ಅಕ್ಕಿ ವಿತರಣೆ ಮಾಡುತ್ತಿದ್ದು, ಕಾಳಸಂತೆಯಲ್ಲಿ ಪಡಿತರ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related