ಸಹ ಶಿಕ್ಷಕರಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಆರಂಭಿಸುವಂತೆ ಡಿಡಿಪಿಐಗೆ ಮನವಿ

ಚಾಮರಾಜನಗರ:  ಆಯುಕ್ತರ ಆದೇಶದಂತೆ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಆರಂಭಿಸುವಂತೆ
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು
    2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಕುರಿತು 18.03.2026 ಮಾ.18
ರಂದು  ಆಯುಕ್ತರಿಂದ ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೆಶಕರಿಗೆ (ಆಡಳಿತ) ಆದೇಶವಾಗಿರುತ್ತದೆ.
ಸುಮಾರು ವರ್ಷಗಳಿಂದ ಬಡ್ತಿ ಪ್ರಕ್ರಿಯೆ ನಿಂತಿದ್ದರಿಂದ ನಮ್ಮ ಜಿಲ್ಲೆಯಲ್ಲಿ ಬಡ್ತಿಯಿಂದ ವಂಚಿತರಾಗಿ ಅನೇಕ ಹಿರಿಯ ಶಿಕ್ಷಕರು ನಿವೃತ್ತಿಯನ್ನು ಹೊಂದಿರುತ್ತಾರೆ. ಪ್ರಸ್ತುತ ಜಿಲ್ಲೆಯಲ್ಲಿ ಸಾಕಷ್ಟು ಮುಖ್ಯ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅನೇಕ ಹಿರಿಯ ಸಹ ಶಿಕ್ಷಕರು ನಿವೃತ್ತಿಯ ಅಂಚಿನಲ್ಲಿದ್ದಾರೆ. ನಮ್ಮೆಲ್ಲರ ಆಶಯದಂತೆ ಈಗ ಬಡ್ತಿ ಪ್ರಕ್ರಿಯೆ ಆರಂಭವಾಗಿದೆ. ಶಾಲಾ ಆಡಳಿತಾತ್ಮಕ ಹಿತದೃಷ್ಠಿಯಿಂದಲೂ ಬಹುಬೇಗ ಮುಗಿಸಬೇಕಿದೆ.
  ಆದ್ದರಿಂದ, ಜಿಲ್ಲೆಯಲ್ಲಿ ಬಡ್ತಿ ನೀಡುವ ಸಮಕ್ಷಮ ಪ್ರಾಧಿಕಾರಿಗಳು ತಾವೇ ಆಗಿರುವುದರಿಂದ ದಯಮಾಡಿ
2026 ಜ. 1ರಲ್ಲಿದ್ದಂತೆ ಜಿಲ್ಲೆಯ ಜೇಷ್ಠತಾ ಪಟ್ಟಿಯನ್ನು ಸಿದ್ದಪಡಿಸಿ ಪ್ರಕಟಿಸಿ, ನಂತರ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ, ಅಂತಿಮ ಅರ್ಹತಾ ಪಟ್ಟಿ ತಯಾರಿಸಿ, ಬಡ್ತಿ ಪ್ರಕ್ರಿಯೆ ನಡೆಸುವ ವೇಳಾ ಪಟ್ಟಿಯನ್ನು ತಕ್ಷಣ ಬಿಡುಗಡೆ ಮಾಡಿ, ಶೀಘ್ರವಾಗಿ
ಕೌನ್ಸಿಲಿಂಗ್‌ ಪೂರ್ಣಗೊಳಿಸಲು ಜಿಲ್ಲೆಯ ಸಮಸ್ತ ಶಿಕ್ಷಕರ ಪರವಾಗಿ   ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸಲ್ಲಿಸಿರುವ ಮನವಿಯಲ್ಲಿ
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ಮಾದಪ್ಪ, ಪ್ರಧಾನ ಕಾರ್ಯ ದರ್ಶಿ ಮಹಾದೇವಸ್ವಾಮಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಚಾಮರಾಜನಗರ ತಾಲೂಕು ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಶಿವಪ್ರಸಾದ್, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ಶ್ರೀಧರ್,ಕಾರ್ಯದರ್ಶಿ ನಂದೀಶ್, ಯಳಂದೂರು ತಾಲೂಕು ಅಧ್ಯಕ್ಷ ಸೋಮಣ್ಣ, ಕಾರ್ಯದರ್ಶಿ ನಾಗರಾಜು, ಹನೂರು ತಾಲೂಕು ಕಾರ್ಯದರ್ಶಿ ನಾಗಸುಂದರ,
ಪದಾಧಿಕಾರಿಗಳಾದ ಎಂಡಿ.ಮಹದೇವಯ್ಯ, ಭರತ್ ಭೂಷಣ್, ಶಾಂತರಾಜು, ಮಹಾದೇವಸ್ವಾಮಿ, ಕೃಷ್ಣಮೂರ್ತಿ, ಪುಟ್ಟಸ್ವಾಮಿ, ಸಮೀವುಲ್ಲಾ, ಧನಂಜಯ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *