ಚಾಮರಾಜನಗರ ಜಿಲ್ಲೆಗೆ ಪ್ರತಿ ವರ್ಷ ಮಾಧ್ಯಮ ಪ್ರಶಸ್ತಿ ನೀಡಲು ಸುತ್ತೂರು ಶ್ರೀಗಳಿಗೆ ಮನವಿ

ಚಾಮರಾಜನಗರ: ಸುತ್ತೂರು ಶ್ರೀಮಠದಿಂದ ನೀಡಲಾಗುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿಯನ್ನು ಪ್ರತಿವರ್ಷವೂ ಚಾಮರಾಜನಗರ ಜಿಲ್ಲೆಗೆ ಪ್ರತ್ಯೇಕವಾಗಿ ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಸುತ್ತೂರು ಶ್ರೀಗಳಾದ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದಲ್ಲಿ ನಡೆದ ಶರಣ ಸಾಹಿತ್ಯ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಭಾಗವಹಿಸಿದ್ದ ವೇಳೆ, ಸಂಘದ ಪದಾಧಿಕಾರಿಗಳು ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪದಾಧಿಕಾರಿಗಳು, ಚಾಮರಾಜನಗರ ಜಿಲ್ಲೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಹೊಂದಿದ್ದು, ಅನೇಕ ಹಿರಿಯ ಪತ್ರಕರ್ತರು ಹಲವು ವರ್ಷಗಳಿಂದ ಸಮಾಜಮುಖಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.
ಆದ್ದರಿಂದ ಜಿಲ್ಲೆಯ ಪತ್ರಕರ್ತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷವೂ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಚಾಮರಾಜನಗರ ಜಿಲ್ಲೆಗೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಎನ್‌. ಸಿದ್ದಲಿಂಗಸ್ವಾಮಿ, ನ್ಯೂಸ್ 18 ಹಿರಿಯ ವರದಿಗಾರ ಎಸ್‌.ಎಂ. ನಂದೀಶ್, ಪತ್ರಕರ್ತರಾದ ರಾಜು, ಲಿಂಗಪ್ಪ, ಹೊಮ್ಮನಂಜುಂಡನಾಯಕ ಸೇರಿದಂತೆ ಇತರರು
ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *