ಮೇಗಲಹುಂಡಿ ಗ್ರಾಮದಲ್ಲಿ ಶ್ರೀ ಮಲೆ ಮಹದೇಶ್ವರ ದೇವಸ್ಥಾನದ ಜೀರ್ಣೋದ್ಧಾರ: ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಚಾಮರಾಜನಗರ: ತಾಲೂಕಿನ ಮೇಗಲಹುಂಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಹಿನ್ನೆಲೆಯಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದೇವಸ್ಥಾನದಲ್ಲಿ ನಡೆದ ಮಹಾಮಂಗಳಾರತಿಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದ ಸಚಿವರು, ಗ್ರಾಮದ ಜನರೊಂದಿಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬಳಿಕ ಗ್ರಾಮಸ್ಥರು ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಚಿನ್ನಶೆಟ್ಟಿ ವರದರಾಜು, ನಂಜುಂಡಶೆಟ್ಟಿ, ಕೆಂಪಶೆಟ್ಟಿ, ಕೃಷ್ಣಶೆಟ್ಟಿ, ಸಿದ್ದರಾಜು, ಮರಿಯಶೆಟ್ಟಿ, ನಂಜಶೆಟ್ಟಿ, ಮಹದೇಶ್ವಾಮಿ, ರಾಜೇಶ್, ರಮೇಶ್, ನಾಗರಾಜು ಸೇರಿದಂತೆ ಗ್ರಾಮಸ್ಥರು ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *