ಚಾಮರಾಜನಗರ:ನಿವೃತ್ತ ಪ್ರಾಧ್ಯಾಪಕ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮದ ಡಾ.ಎನ್.ಸೋಮಶೇಖರ್ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ನಗರದ ಮುದುಕುಮಾರಮ್ಮ ದೇವಸ್ಥಾನ ಮುಂಭಾಗದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಸೋಮಹಳ್ಳಿ ಸೋಮಶೇಖರ್ ಅವರಿಗೆ ಪಕ್ಷದ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಪಕ್ಷದ ಶಲ್ಯ ಹಾಕಿ ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡು, ಪಕ್ಷದ ಬೆಳವಣಿಗೆಗೆ ಕೆಲಸ ಮಾಡುವಂತೆ ಸಲಹೆ ನೀಡಿದರು.
ಬಿಜೆಪಿಗೆ ಸೇರ್ಪಡೆಯಾದ ಸೋಮಹಳ್ಳಿ ಸೋಮಶೇಖರ್ ಮಾತನಾಡಿ, ಭಾರತದ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಹೆಚ್ಚಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾಯಕತ್ವ ಪ್ರದರ್ಶಿಸಿ ವಿಶ್ವನಾಯಕರಾಗಿರುವ ಪ್ರಧಾನಿ ನರೇಂದ್ರಮೋದಿಯವರ ನಾಯಕತ್ವವನ್ನು ಮೆಚ್ಚಿಕೊಂಡು ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷದ ಸಂಘಟನೆಗೆ ಒತ್ತು ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಬಿಜೆಪಿ ಜಿಲ್ಲಾ ವಕ್ತಾರ ಮನೋಜ್ ಪಟೇಲ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಮುಖಂಡ ಆರ್.ಸುಂದರ್, ಎ.ಆರ್.ಬಾಬು. ಎಂ.ಎಸ್.ಚಂದ್ರಶೇಖರ್ ರಾಮಸಮುದ್ರಶಿವಣ್ಣ, ಕಿಲಗೆರೆಶಶಿ ಇತರರು ಹಾಜರಿದ್ದರು.
