ಚಾಮರಾಜನಗರ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕುರಿತು ಈ ಹಿಂದೆ ಹೊರಡಿಸಲಾಗಿದ್ದ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಈ ಪ್ರಕಾರ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‍ಒ) ಮನೆಮನೆಗೆ ಭೇಟಿ ನೀಡುವ ಕಾರ್ಯವು ಆಗಸ್ಟ್ 8ರವರೆಗೆ ವಿಸ್ತರಣೆಯಾಗಿದೆ.
ಈ ಹಿಂದಿನ ವೇಳಾಪಟ್ಟಿ ಪ್ರಕಾರ ಬಿಎಲ್‍ಒಗಳು ಜೂನ್ 30 ರಿಂದ ಜುಲೈ 29ರವರೆಗೆ ಮನೆಮನೆಗೆ ಭೇಟಿ ನೀಡಬೇಕಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆಗಸ್ಟ್ 8ರವರೆಗೂ ಮನೆಮನೆಗೆ ಬಿಎಲ್‍ಒಗಳು ಭೇಟಿ ನೀಡಲಿದ್ದಾರೆ. ಮತಗಟ್ಟೆಗಳ ಮರು ಸಂಯೋಜನೆಗೆ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಜುಲೈ 29ಕ್ಕೆ ಅವಧಿ ನಿಗದಿಯಾಗಿದ್ದು, ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ. ಕರಡು ಮತದಾರರ ಪಟ್ಟಿ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆಗಸ್ಟ್ 5ರಂದು ಪ್ರಕಟವಾಗಬೇಕಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆಗಸ್ಟ್ 17ರಂದು ಪ್ರಕಟವಾಗಲಿದೆ.
ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆಗಸ್ಟ್ 5 ರಿಂದ ಸೆಪ್ಟೆಂಬರ್ 4ರವರೆಗೆ ನಿಗದಿಯಾಗಿದ್ದ ದಿನಾಂಕವನ್ನು ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆಗಸ್ಟ್ 17ರಿಂದ ಸೆಪ್ಟೆಂಬರ್ 16ರವರೆಗೆ ನಿಗದಿ ಮಾಡಲಾಗಿದೆ. ನೋಟಿಸ್ ಅವಧಿ/ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಗಾಗಿ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆಗಸ್ಟ್ 5 ರಿಂದ ಅಕ್ಟೋಬರ್ 3ರವರೆಗೆ ಅವಧಿ ನಿಗದಿಯಾಗಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆಗಸ್ಟ್ 17 ರಿಂದ ಅಕ್ಟೋಬರ್ 15ರವರೆಗೆ ನಿಗದಿ ಮಾಡಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಈ ಹಿಂದಿನ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 7ಕ್ಕೆ ಪ್ರಕಟಿಸಬೇಕಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 19ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Like this:
Like Loading...
Related