ಕರವೇ ಹೆಚ್.ಶಿವರಾಮೇಗೌಡರ ಬಣದ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ಸಾಗರ್‌ರಾವತ್ ನೇಮಕ

ಚಾಮರಾಜನಗರ : ಕರ್ನಾಟಕ ರಕ್ಷಣಾ ವೇದಿಕೆ ಹೆಚ್.ಶಿವರಾಮೇಗೌಡರ ಬಣದ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ಸಾಗರ್‌ರಾವತ್ ನೇಮಕಗೊಂಡರು.
ನಗರದ ಪ್ರವಾಸಿಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹೆಚ್.ಶಿವರಾಮೇಗೌಡರ ಬಣದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧ್ಯಕ್ಷ ನಮ್ಮನೆ ಪ್ರಶಾಂತ್ ಜಿಲ್ಲಾ ಯುವ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕವಾದ ಸಾಗರ್‌ರಾವತ್ ಅವರಿಗೆ ನೇಮಕಾತಿ ಆದೇಶಪತ್ರ ವಿತರಿಸಿದರು. ಸಾಗರ್ ರಾವರ್ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವೇದಿಕೆ ಜಿಲ್ಲಾಧ್ಯಕ್ಷ ನಮ್ಮನೆ ಪ್ರಶಾಂತ್ ಮಾತನಾಡಿ, ಎಲ್ಲ ಸರ್ಕಾರಿ ಇಲಾಖೆಗಳ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಸಾರ್ವಜನಿಕರ ಕೆಲಸಗಳು ಸರಿಯಾಗಿ ಆಗುತ್ತಿಲ್ಲ. ನಮ್ಮ ಸಂಘಟನೆಯು ಕನ್ನಡ ನಾಡು, ನುಡಿ, ನೆಲ ಜಲ, ಗಡಿ ಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜೊತೆಗೆ ಸೇವಾ ಕಾರ್ಯಗಳನ್ನು ಮಾಡಲಾಗುತ್ತದೆ. ಅಲ್ಲದೆ ಮುಂದಿನ ದಿನಗಳಲ್ಲಿ ನೊಂದವರ ಪರ ನಿಂತು ಕೆಲಸ ಮಾಡುವ ಮೂಲಕ ಸಂಘಟನೆಯನ್ನು ಸದೃಢವಾಗಿ ಕಟ್ಟೋಣ, ನಾಡಿನ ಸೇವೆಯನ್ನು ಮಾಡೋಣ ಎಂದರು.
ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಆಲೂರು ಮಲ್ಲು ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಅನ್ಯಭಾಷೆಯ ಅಧಿಕಾರಿಗಳು ಇದ್ದಾರೆ ಇವ
ರಿಂದ ಕನ್ನಡಿಗರಿಗೆ ಕಿರುಕುಳ ಆಗುತ್ತಿದೆ. ಭಾಷೆಯ ಕೊರತೆಯಿಂದಾಗಿ ಗ್ರಾಮೀಣ ಪ್ರದೇಶದ ಜನರು ವ್ಯವಹರಿಸುವುದು ಕಷ್ಟಕರವಾಗಿದೆ. ಆಗಾಗಿ ಬ್ಯಾಂಕ್‌ಗಳಲ್ಲಿ ಅನ್ಯಭಾಷೆಯ ವ್ಯವಸ್ಥಾಪಕರು ನೇಮಕ ಮಾಡುವುದನ್ನು ಸರ್ಕಾರಗಳು ಕೈಬಿಡಬೇಕು ಇಲ್ಲದಿದ್ದರೆ ಇದರ ಬಗ್ಗೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ವೇದಿಕೆಯ ಜಿಲ್ಲಾ ಸಂಘಟನಾ ಸಲಹೆ ಗೌರವಾಧ್ಯಕ್ಷ ಬಸವನಪುರ ರಾಜಶೇಖರ ಮಾತನಾಡಿ, ಕನ್ನಡನಾಡು ನುಡಿಗಾಗಿ ಅನೇಕ ಮಹನೀಯರು ಕೆಲಸ ಮಾಡಿದ್ದಾರೆ. ಇನ್ನೂ ಕೂಡ ಪರ ಭಾಷಿಗರು ಕನ್ನಡ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಯಾವುದೇ ಮೂಲೆಯಲ್ಲೂ ಕನ್ನಡ ನಾಡು, ನುಡಿ, ಜಲಕ್ಕೆ ಧಕ್ಕೆ ಉಂಟು ಮಾಡಿದರೆ ಅದರ ವಿರುದ್ಧ ಹೋರಾಟ ಮಾಡಬೇಕಿದೆ ಎಂದರು.
ಸಭೆಯಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ನಾಸೀರ್ ಖಾನ್, ಕಾರ್ಯಕರ್ತರಾದ ಆಟೋ ಮಂಜುನಾಥ್, ನಾಗರಾಜು, ಮೋಹನ್, ಬದನಗುಪ್ಪೆ ಜಯಶೀಲ, ಶಿವರಾಜು ಸಿದ್ದಯ್ಯಪುರ, ಮಹಿಳಾ ಘಟಕದ ಡಿ.ಎನ್.ಉಷಾ, ಜ್ಯೋತಿ, ಆಶಾರವೀಶ್, ನಾಗಲಕ್ಷ್ಮೀ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *