ಹರಳುಕೋಟೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮಲೆ ಮಾದೇಶ್ವರ ಬೆಟ್ಟ ಪ್ರಾಧಿಕಾರ ಕಾರ್ಯದರ್ಶಿ ಸರಸ್ವತಿ ಕುಟುಂಬ

ಚಾಮರಾಜನಗರ: ಪುರತನ ಕಾಲದ ಪ್ರಸಿದ್ಧವಾದ ಹರಳುಕೋಟೆ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಮಲೆ ಮಾದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಕುಟುಂಬ ಸಮೇತ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಗಡಿನಾಡು ಉತ್ಸವ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ನಂತರ ರಾಮಸಮುದ್ರದ ಸಮೀಪದಲ್ಲಿ ಇರುವ ಬಬ್ರುವಾಹನ ಕಾಲದ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭ ಅರ್ಚಕ ಅನಂತ ಪ್ರಸಾದ್ ಆತ್ಮೀಯವಾಗಿ ಸ್ವಾಗತಿಸಿ ದೇವಸ್ಥಾನದ ಮಹತ್ವವನ್ನು ತಿಳಿಸಿ ವಿಶೇಷ ಪೂಜೆ ಅರ್ಚನೆ ಮಾಡಿದರು. ನಂತರ ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಹಾಗೂ ಜನಾರ್ಧನ ಪ್ರತಿಷ್ಠಾನದ ವತಿಯಿಂದ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಕುಟುಂಬವನ್ನು ಸನ್ಮಾನಿಸಲಾಯಿತು.

ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ರಾಮಸಮುದ್ರದ ಜಿ.ಬಂಗಾರು, ನಗರಸಭಾ ಸದಸ್ಯ ಚಂದ್ರಶೇಖರ್, ರಂಗಸ್ವಾಮಿ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *