
ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರು ಶ್ರೀ ಸುತ್ತೂರು ಕ್ಷೇತ್ರವನ್ನು ತಮ್ಮ ತಪಸ್ಸಿದ್ಧಿಯಿಂದ ಜಾಗೃತ ಧರ್ಮಕ್ಷೇತ್ರವನ್ನಾಗಿ ನೆಲೆಗೊಳಿಸಿರುವರು. ಪೂಜ್ಯರು ಸಂಸ್ಥಾಪಿಸಿದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠವು ಸಹಸ್ರಾರು ವರ್ಷಗಳಿಂದ ಜನತೆಯ ಸಮಗ್ರ ಉನ್ನತಿಗಾಗಿ ಜ್ಞಾನಾನ್ನದಾಸೋಹಗಳ ಕೈಂಕರ್ಯವನ್ನು ನಡೆಸುತ್ತಾ ಬಂದಿದೆ. ಶ್ರೀಮಠದ ಎಲ್ಲ ಪೂಜ್ಯ ಜಗದ್ಗುರುಗಳು ತಮ್ಮ ಅನುಪಮ ತಪೆÇೀನುಷ್ಠಾನದಿಂದ ಲೋಕೋದ್ಧಾರದ ಸೇವಾಕಾರ್ಯಗಳನ್ನು ಕೈಗೊಂಡಿದ್ದಾರೆ.
ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರಿಂದ ಸ್ಥಾಪಿತವಾದ ಜೆಎಸ್‍ಎಸ್ ಮಹಾವಿದ್ಯಾಪೀಠ ಹಾಗೂ ಇದರ ಅಂಗಸಂಸ್ಥೆಗಳ ಮೂಲಕ ದೇಶವಿದೇಶಗಳಲ್ಲಿ ಧರ್ಮ, ಸಂಸ್ಕøತಿ, ಶಿಕ್ಷಣ, ಆರೋಗ್ಯ, ಕೃಷಿ, ಗ್ರಾಮೀಣಾಭಿವೃದ್ಧಿ, ಸಮಾಜಸುಧಾರಣೆ ಮುಂತಾದ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವಾಕಾರ್ಯಗಳು ನಡೆಯುತ್ತಿವೆ.

ಆದಿ ಜಗದ್ಗುರುಗಳವರ ಜಾತ್ರಾ ಮಹೋತ್ಸವವು ಪ್ರತಿ ವರ್ಷ ಪುಷ್ಯ ಬಹುಳ ದ್ವಾದಶಿಯಂದು ಪ್ರಾರಂಭಗೊಂಡು ಮಾಘ ಶುದ್ಧ ಬಿದಿಗೆಯವರೆಗೆ ಆರು ದಿನಗಳ ಕಾಲ ನೆರವೇರುತ್ತದೆ. ಮಾಸಶಿವರಾತ್ರಿಯಂದು ರಥೋತ್ಸವ ಹಾಗೂ ಮಾಘ ಶುದ್ಧ ಪಾಡ್ಯಮಿಯಂದು ತೆಪೆÇ್ಪೀತ್ಸವ ಜರುಗುತ್ತವೆ. ಈ ಸಂಭ್ರಮದ ಜಾತ್ರೆಯಲ್ಲಿ ಜನತೆಯ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಹಲವಾರು ವೈವಿಧ್ಯಪೂರ್ಣ ಕಾರ್ಯಕ್ರಮಗಳು ನಡೆಯುತ್ತವೆ.
ಜಾತ್ರೆಯ ಎಲ್ಲ ಕಾರ್ಯಕ್ರಮಗಳು ಮತ್ತು ಪೂಜಾಕೈಂಕರ್ಯಗಳು ಭಕ್ತಾದಿಗಳು, ಸೇವಾರ್ಥದಾರರು, ಸಾರ್ವಜನಿಕರು, ಸಂಘಸಂಸ್ಥೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ ಸಹಾಯ, ಸಹಕಾರಗಳಿಂದ ನಡೆಯುತ್ತವೆ.

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಈ ವರ್ಷ ಫೆಬ್ರವರಿ 6 ಮಂಗಳವಾರದಿಂದ 11 ಭಾನುವಾರದÀವರೆಗೆ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿದೆ.
ಫೆಬ್ರವರಿ 6ರಂದು ಶ್ರೀ ವೀರಭದ್ರೇಶ್ವರ ಕೊಂಡೋತ್ಸವ, 7ರಂದು ಸಾಮೂಹಿಕ ವಿವಾಹ, ಹಾಲ್ಹರವಿ ಉತ್ಸವ, 8ರಂದು ರಥೋತ್ಸವ, 9ರಂದು ಶ್ರೀ ಮಹದೇಶ್ವರ ಕೊಂಡೋತ್ಸವ ಮತ್ತು ಲಕ್ಷದೀಪೋತ್ಸವ, 10ರಂದು ಶ್ರೀಮತಿ ಪಾರ್ವತಮ್ಮ ಮತ್ತು ಡಾ. ಶ್ರೀ ಶಾಮನೂರು ಶಿವಶಂಕರಪ್ಪ ಅತಿಥಿಗೃಹದ ಉದ್ಘಾಟನೆ ಮತ್ತು ತೆಪ್ಪೋತ್ಸವ ಹಾಗೂ 11ರಂದು ಅನ್ನಬ್ರಹ್ಮೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಇವುಗಳ ಜೊತೆಗೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳು, ವೈವಿಧ್ಯಮಯ ಸಾಂಸ್ಕøತಿಕ, ಶೈಕ್ಷಣಿಕ ಹಾಗೂ ಕ್ರೀಡಾಚಟುವಟಿಕೆಗಳು ಜರುಗಲಿವೆ.
ರಂಗೋಲಿ ಮತ್ತು ಸೋಬಾನೆಪದ ಸ್ಪರ್ಧೆಗಳು : ಫೆಬ್ರವರಿ 6 ಮಂಗಳವಾರದಂದು ಗ್ರಾಮೀಣ ಕಲೆಗಳಾದ ಸೋಬಾನೆಪದ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಭಜನಾ ಮೇಳ : ಈ ವರ್ಷ 30ನೇ ರಾಜ್ಯಮಟ್ಟದ ಭಜನಾ ಮತ್ತು ಏಕತಾರಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸುಮಾರು 750ಕ್ಕೂ ಹೆಚ್ಚು ಪುರುಷ, ಮಹಿಳಾ, ಮಕ್ಕಳ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಒಟ್ಟು ಏಳು ವಿಭಾಗಗಳಲ್ಲಿ ಈ ಸ್ಪರ್ಧೆ ನಡೆಯಲಿದ್ದು. ಪ್ರತಿ ವಿಭಾಗಕ್ಕೂ ಪ್ರತ್ಯೇಕ ಬಹುಮಾನಗಳನ್ನು ನೀಡಲಾಗುತ್ತದೆ.
ವಸ್ತುಪ್ರದರ್ಶನ : ವಸ್ತುಪ್ರದರ್ಶನದಲ್ಲಿ ಕೈಗಾರಿಕೋತ್ಪನ್ನಗಳು, ಕೈಮಗ್ಗ, ಜವಳಿ, ಗ್ರಾಮೀಣ ಕರಕುಶಲ ಉತ್ಪನ್ನಗಳು, ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಸಂಘಗಳು ತಯಾರಿಸಿದ ಗೃಹಬಳಕೆ ಉತ್ಪನ್ನಗಳು ಹಾಗೂ ಗುಡಿ ಕೈಗಾರಿಕೆ ವಸ್ತುಗಳÀ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಇರುತ್ತದೆ. ಜೆಎಸ್‍ಎಸ್ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಸಿದ್ಧಪಡಿಸಿದ 200ಕ್ಕೂ ಹೆಚ್ಚು ಶಿಕ್ಷಣ ಮತ್ತು ವಿಜ್ಞಾನಕ್ಕೆ ಸಂಬಂಧಿಸಿದ ಮಾದರಿಗಳಿರುತ್ತವೆ. ಸರ್ಕಾರದ ಅಭಿವೃದ್ಧಿ ಇಲಾಖೆಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ಮಹಿಳಾ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ವೈದ್ಯಕೀಯ ಹಾಗೂ ತಾಂತ್ರಿಕ ವಸ್ತುಪ್ರದರ್ಶನವೂ ಇರುತ್ತದೆ.
ಸಾಮೂಹಿಕ ವಿವಾಹ : ಫೆಬ್ರವರಿ 7 ಬುಧವಾರದಂದು ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಜಾತಿ-ಮತ ಭೇದವಿಲ್ಲದೆ ಸರ್ವಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅಂತರ್ಜಾತಿ, ವಿಶೇಷ ಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಸಹ ಪಾಲ್ಗೊಳ್ಳಲಿದ್ದಾರೆ. ವಿವಾಹಗಳ ನೋಂದಣಿಯನ್ನು ಮಾಡಿಸಲಾಗುತ್ತದೆ. ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗೂ ಕಾಲುಂಗುರಗಳನ್ನು, ವರನಿಗೆ ಪಂಚೆ, ವಲ್ಲಿ, ಷರ್ಟ್‍ಗಳನ್ನು ನೀಡಲಾಗುತ್ತದೆ. ಸಾಮೂಹಿಕ ವಿವಾಹ ವ್ಯವಸ್ಥೆಯಲ್ಲಿ ಈವರೆಗೆ 3000ಕ್ಕೂ ಹೆಚ್ಚು ಮಂದಿ ಸತಿಪತಿಗಳಾಗಿದ್ದಾರೆ. ವಧು-ವರರು ವಿವಾಹದ ದೃಢೀಕರಣಪತ್ರ ಹಾಗೂ ನೋಂದಣಿಪತ್ರಗಳನ್ನು ಸಲ್ಲಿಸಿ, ಸರ್ಕಾರ ನೀಡುವ ಪ್ರೋತ್ಸಾಹಧನವನ್ನು ಪಡೆದುಕೊಳ್ಳಬಹುದಾಗಿದೆ.
ಕೃಷಿ ಮೇಳ : ಈ ವರ್ಷ ‘ಹನಿ ಹನಿಗೂ ಭರಪೂರ ತೆನೆ’ ಎಂಬ ಶೀರ್ಷಿಕೆಯಡಿ ಸಾಂಪ್ರದಾಯಿಕ ಹಾಗೂ ಆಧುನಿಕ ತಂತ್ರಜ್ಞಾನಾಧಾರಿತ ಕೃಷಿಮೇಳವನ್ನು ಆಯೋಜಿಸಲಾಗಿದೆ. ಒಂದು ಎಕರೆ ‘ಕೃಷಿ ಬ್ರಹ್ಮಾಂಡ’, ನೆರಳುಮನೆಯಲ್ಲಿ ಬೆಳೆದ ಹಲವಾರು ದೇಸಿ ಹಾಗೂ ವಿದೇಶಿ ತರಕಾರಿಗಳು, ಏಕದಳ, ದ್ವಿದಳ ಧಾನ್ಯಗಳು, ಎಣ್ಣೆಕಾಳುಗಳು, ವಾಣಿಜ್ಯ ಬೆಳೆಗಳು, ಮೇವಿನ ಬೆಳೆಗಳು, ವಿವಿಧ ಫಲಪುಷ್ಪಗಳು, ತೋಟಗಾರಿಕೆ ಬೆಳೆಗಳು, ರೇಷ್ಮೆಕೃಷಿ, ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳನ್ನು ಅನುಸರಿಸಿ ಬೆಳೆದಿರುವ ಸುಮಾರು 300 ಬೆಳೆಗಳು ಹಾಗೂ ವಿವಿಧ ತಳಿಗಳ ಪ್ರಾತ್ಯಕ್ಷಿಕೆಯ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಕೃಷಿ ಅಭಿವೃದ್ಧಿ ಇಲಾಖೆಗಳು, ವಿಶ್ವವಿದ್ಯಾನಿಲಯಗಳು ಹಾಗೂ ಖಾಸಗಿ ಉಪಕರಣಗಳ ಮಾರಾಟಗಾರರು ಈ ವಸ್ತುಪ್ರದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಮಾಡಲಾಗಿದೆ. ದೇಸಿ ತಳಿಗಳ ಹಸು, ಕುರಿ, ಮೇಕೆ, ಕೋಳಿಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕೃಷಿ ವಿಚಾರಸಂಕಿರಣ : ಫೆಬ್ರವರಿ 9 ಶುಕ್ರವಾರದಂದು ಕೃಷಿ ಜಮೀನನಲ್ಲಿ ನೀರಿನ ಸದ್ಬಳಕೆ ವಿಚಾರಸಂಕಿರಣ ಏರ್ಪಡಿಸಲಾಗಿದೆ. ರೈತರು ಹಾಗೂ ಅವರ ಮಕ್ಕಳಿಗಾಗಿ ಕೃಷಿ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಚಿತ್ರಕಲಾ ಮತ್ತು ಗಾಳಿಪಟ ಸ್ಪರ್ಧೆಗಳು : 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಬೇರೆ ಬೇರೆ ವಿಭಾಗಗಳಲ್ಲಿ, ಸ್ಥಳದಲ್ಲೇ ವಿವಿಧ ವಿಷಯಗಳ ಕುರಿತು ಚಿತ್ರ ರಚಿಸುವ ರಾಜ್ಯಮಟ್ಟದ ಮಕ್ಕಳ ಚಿತ್ರಕಲಾ ಸ್ಪರ್ಧೆ ಮತ್ತು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಳಿಪಟ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಚಿತ್ರಸಂತೆ : ರಾಜ್ಯ ಹಾಗೂ ಹೊರರಾಜ್ಯ ಕಲಾವಿದರುಗಳ ಕಲಾಕೃತಿಗಳ ಪ್ರದರ್ಶನ, ಮಾರಾಟ ಹಾಗೂ ಸ್ಥಳದಲ್ಲೇ ಸಾರ್ವಜನಿಕರ ಭಾವಚಿತ್ರ ರಚನೆಮಾಡಿ ಮಾರಾಟ ಮಾಡುವ ವ್ಯವಸ್ಥೆಯು ಜಾತ್ರೆಯ ಎಲ್ಲಾ ದಿನಗಳಲ್ಲಿಯೂ ಇರುತ್ತದೆ.
ಕುಸ್ತಿ ಪಂದ್ಯಾವಳಿ : ಫೆಬ್ರವರಿ 9 ಶುಕ್ರವಾರದಂದು ರಾಷ್ಟ್ರಮಟ್ಟದ ನಾಡ ಕುಸ್ತಿ ಪಂದ್ಯಗಳು ನಡೆಯಲಿವೆ. ಈ ಬಾರಿ ಎರಡು ಮಾರ್ಪಿಟ್ ಕುಸ್ತಿಗಳಿರುತ್ತವೆ. ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ವಿಜೇತರಿಗೆ ‘ಸುತ್ತೂರು ಕೇಸರಿ’ ಪ್ರಶಸ್ತಿ ಹಾಗೂ ಸ್ಥಳೀಯ ಉತ್ತಮ ಕುಸ್ತಿ ಸ್ಪರ್ಧೆ ವಿಜೇತರಿಗೆ ‘ಸುತ್ತೂರು ಕುಮಾರ’ ಪ್ರಶಸ್ತಿಗಳನ್ನು ನೀಡಲಾಗುವುದು.
ಆರೋಗ್ಯ ತಪಾಸಣಾ ಶಿಬಿರ : ಜೆಎಸ್‍ಎಸ್ ಆಸ್ಪತ್ರೆ ವತಿಯಿಂದ ಜಾತ್ರಾ ಮಹೋತ್ಸವದ ಎಲ್ಲಾ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.
ಕಟ್ಟಡÀ ಉದ್ಘಾಟನೆ : ಫೆಬ್ರವರಿ 10 ಶನಿವಾರದಂದು ಶ್ರೀಕ್ಷೇತ್ರÀದ ಮಠದ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಮತಿ ಪಾರ್ವತಮ್ಮ ಮತ್ತು ಶ್ರೀ ಶಾಮನೂರು ಶಿವಶಂಕರಪ್ಪ ಅತಿಥಿಗೃಹವು ಉದ್ಘಾಟನೆಗೊಳ್ಳಲಿದೆÉ. ನಾಲ್ಕು ಮಹಡಿಗಳ ಈ ಅತಿಥಿಗೃಹವು ಐವತ್ತು ಕೊಠಡಿಗಳನ್ನು ಹೊಂದಿದ್ದು ಸುಮಾರು 700 ಜನರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಬಹುದಾಗಿದೆ.
ಕ್ಯಾನ್ಸರ್ ತಪಾಸಣಾ ಶಿಬಿರ : ಫೆಬ್ರವರಿ 6ರಿಂದ 10ರವರೆಗೆ 5 ದಿನಗಳ ಕಾಲ ಕ್ಯಾನ್ಸರ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಕ್ಯಾನ್ಸರ್ ತಡೆಗಟ್ಟುವ ಬಗ್ಗೆ ಸಲಹೆ, ಸೂಚನೆ ಹಾಗೂ ವಿವಿಧ ರೀತಿಯ ಕ್ಯಾನ್ಸರ್‍ಗಳ ಬಗ್ಗೆ ಪರೀಕ್ಷೆಗಳನ್ನು ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಲಾಗಿದೆ.
ದೋಣಿ ವಿಹಾರ : ಸಾರ್ವಜನಿಕರ ಮನೋರಂಜನೆಗಾಗಿ ಜಾತ್ರೆಯ ಎಲ್ಲ ದಿನಗಳಲ್ಲಿ ದೋಣಿ ವಿಹಾರವನ್ನು ಏರ್ಪಡಿಸಲಾಗಿದೆ.
ಗ್ರಾಮೀಣ ಜನತೆಗಾಗಿ ದೇಸಿ ಆಟಗಳು : ಪುರುಷರಿಗೆ ಫೆಬ್ರವರಿ 8 ಗುರುವಾರದಂದು ಮತ್ತು ಮಹಿಳೆಯರಿಗೆ 9 ಶುಕ್ರವಾರದÀಂದು ಹಾಗೂ ಜೆಎಸ್‍ಎಸ್ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 7 ಬುಧವಾರದಿಂದ 10 ಶನಿವಾರದವರೆಗೆ ಸ್ಪರ್ಧೆಗಳು ನಡೆಯಲಿವೆ. ದೇಸಿ ಆಟಗಳಾದÀ ಕೆಸರುಗದ್ದೆ ಓಟ, ಹಗ್ಗ-ಜಗ್ಗಾಟ, ಕುಂಟೆಬಿಲ್ಲೆ, ಅಳಿಗುಳಿಮನೆ, ಅಣೆಕಲ್ಲು, ಚದುರಂಗ, ಬುಗುರಿ, ಚೌಕಬಾರ ಜೊತೆಗೆ 50 ಕೆಜಿ ಭಾರದ ಚೀಲ ಹೊತ್ತುಕೊಂಡು ಓಡುವುದು, ಕಲ್ಲುಗುಂಡು ಎತ್ತುವುದು, ತುಂಬಿದ ಬಿಂದಿಗೆಯನ್ನು ತಲೆಯ ಮೇಲೆ ಹೊತ್ತು ಓಡುವುದು ಮುಂತಾದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ವಿಜೇತರಾದವರಿಗೆ ನಗದು ಬಹುಮಾನ, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿಪತ್ರ ನೀಡಲಾಗುವುದು.
53ನೇ ದನಗಳ ಪರಿಷೆ : ದನಗಳ ಜಾತ್ರೆಯನ್ನ್ರು ಕಳೆದ 52 ವರ್ಷಗಳಿಂದಲೂ ಏರ್ಪಡಿಸಲಾಗುತ್ತಿದೆ. ರೈತಬಾಂಧವರು ಎತ್ತು, ಹಸು, ಹೋರಿಗಳನ್ನು ಕೊಂಡುಕೊಳ್ಳಲು ಹಾಗೂ ಮಾರಾಟ ಮಾಡಲು ಅವಕಾಶವಿರುತ್ತದೆ. ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮಾಡಲಾಗುವುದು. ಚುಚ್ಚುಮದ್ದು ಮತ್ತು ಜಂತುಹುಳು ನಿವಾರಕ ಔಷಧಿಯನ್ನು ಉಚಿತವಾಗಿ ನೀಡಲಾಗುತ್ತದೆ. ಉತ್ತಮ ರಾಸುಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.
ಕಪಿಲಾರತಿ : ಫೆಬ್ರವರಿ 10 ಶನಿವಾರ ತೆಪ್ಪೋತ್ಸವದಂದು ನಂಜನಗೂಡಿನ ಯುವ ಬ್ರಿಗೇಡ್‍ನ ಸಹಯೋಗದಲ್ಲಿ ಕಪಿಲಾರತಿಯನ್ನು ಏರ್ಪಡಿಸಲಾಗಿದೆ.
ಸಾಂಸ್ಕøತಿಕ ಮೇಳ : ಜೆಎಸ್‍ಎಸ್ ಅಂತರಸಂಸ್ಥೆಗಳ ಸಾಂಸ್ಕøತಿಕ ಮೇಳದಲ್ಲಿ 3,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಭರತನಾಟ್ಯ, ಸಾಮೂಹಿಕ ನೃತ್ಯ, ಶಾಸ್ತ್ರೀಯ ಸಂಗೀತ, ವಚನಾಧಾರಿತ ನೃತ್ಯ, ಸಾಮೂಹಿಕ ಗಾಯನ ಸ್ಪರ್ಧೆಗಳ ಮೂಲಕ ಸುಮಾರು 400ಕ್ಕೂ ಹೆಚ್ಚು ಕಾರ್ಯಕ್ರಮಗಳಿರುತ್ತವೆ.
ಸಾಂಸ್ಕøತಿಕ ಕಾರ್ಯಕ್ರಮಗಳು : ಗದ್ದುಗೆಯ ಆವರಣದಲ್ಲಿ ನಗರಪ್ರದೇಶಗಳ ವೃತ್ತಿಪರ ಹಾಗೂ ಹವ್ಯಾಸಿ ಕಲಾವಿದರಿಂದ ಗಾಯನ, ನೃತ್ಯ ಹಾಗೂ ನಾಟಕಗಳಿರುತ್ತವೆÉ. ಗ್ರಾಮಾಂತರÀ ಪ್ರದೇಶದ ನಾಟಕ ತಂಡಗಳಿಂದ ಇಪ್ಪತ್ತಕ್ಕೂ ಹೆಚ್ಚು ಪೌರಾಣಿಕ ನಾಟಕಗಳು ಏಕಕಾಲದಲ್ಲಿ ನಾಲ್ಕು ವೇದಿಕೆಗಳಲ್ಲಿ ಪ್ರದರ್ಶನಗೊಳ್ಳುತ್ತವೆ.
ವಸ್ತುಪ್ರದರ್ಶನ ಆವರಣದಲ್ಲಿ ಪ್ರತಿದಿನ ಸಂಜೆ 7ರಿಂದ 9ರವರೆಗೆ ವಿಶೇಷ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಹೊರಗಿನ ಕಲಾವಿದರು ನೀಡುತ್ತಾರೆ.
ಕಲಾತಂಡಗಳಿಂದ ಪ್ರದರ್ಶನ : ಕರ್ನಾಟಕ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳ ಕಲಾತಂಡಗಳವರು ವರ್ಣರಂಜಿತ ಕಲಾಪ್ರದರ್ಶನಗಳನ್ನು ಜಾತ್ರೆಯ ಮೊದಲ ದಿನದಿಂದ ಕೊನೆಯವರೆಗೂ ನೀಡುತ್ತಾರೆ.
ಛಾಯಾಚಿತ್ರ ಸ್ಪರ್ಧೆ : ಜಾತ್ರಾ ಮಹೋತ್ಸವಕ್ಕೆ ಸಂಬಂಧಪಟ್ಟ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಡಿಎಸ್‍ಎಲ್‍ಆರ್ ಕ್ಯಾಮೆರಾ ಹಾಗೂ ಮೊಬೈಲ್ ಛಾಯಾಚಿತ್ರಗಳ ಎರಡು ವಿಭಾಗಗಳ ಸ್ಪರ್ಧೆ ಇರುತ್ತದೆ. ಸ್ಪರ್ಧೆಗೆ ಯಾವುದೇ ಶುಲ್ಕವಿರುವುದಿಲ್ಲ ಹಾಗೂ ವಯೋಮಾನದ ನಿಬರ್ಂಧವಿಲ್ಲ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಯಸುವವರು 9686677284, 9448609062 ದೂರವಾಣಿಗಳಲ್ಲಿ ಸಂಪರ್ಕಿಸಿ ವಿವರ ಪಡೆದು, ನೋಂದಾಯಿಸಿಕೊಳ್ಳಬಹುದಾಗಿದೆ.
ಪ್ರಸಾದ ಮತ್ತು ವಸತಿ ವ್ಯವಸ್ಥೆ : ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವ ಸಮಸ್ತ ಭಕ್ತಾದಿಗಳಿಗೆ ಪ್ರತಿನಿತ್ಯವೂ ಬೆಳಗ್ಗೆ ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದದ ವ್ಯವಸ್ಥೆ ಇರುತ್ತದೆ. ಒಟ್ಟು 6 ದಿನಗಳ ಪ್ರಸಾದ ತಯಾರಿಕೆಗೆ 1000 ಕ್ವಿಂಟಲ್ ಅಕ್ಕಿ, 180 ಕ್ವಿಂಟಲ್ ತೊಗರಿಬೇಳೆ, 1500 ಕ್ಯಾನ್ ರಿಫೈನ್ಡ್ ಅಡುಗೆ ಎಣ್ಣೆ, 12 ಟನ್ ಬೆಲ್ಲ, 4000 ಕೆ.ಜಿ. ಖಾರದಪುಡಿ, 250 ಕ್ವಿಂಟಲ್ ಸಕ್ಕರೆ, 500 ಕೆ.ಜಿ. ನಂದಿನಿ ತುಪ್ಪ, ತಲಾ 800 ಕೆ.ಜಿ. ದ್ರಾಕ್ಷಿ, ಗೋಡಂಬಿ, 8000 ಲೀ. ಹಾಲು, 28,000 ಲೀ. ಮೊಸರು, 25,000 ತೆಂಗಿನಕಾಯಿ ಹಾಗೂ 5000 ಕೆ.ಜಿ. ಉಪ್ಪಿನಕಾಯಿಯನ್ನು ಬಳಸಲಾಗುತ್ತದೆ. ಬೆಳಗಿನ ಪ್ರಸಾದಕ್ಕೆ ವಿವಿಧ ದಿನಗಳಂದು ಬೆಲ್ಲದ ಅನ್ನ, ಅಕ್ಕಿನುಚ್ಚಿನ ಉಪ್ಪಿಟ್ಟು, ಕೇಸರಿಬಾತ್, ಖಾರಾಬಾತ್, ಸಿಹಿ ಪೊಂಗಲ್, ಖಾರಾ ಪೊಂಗಲ್, ಹುಳಿಗೊಜ್ಜು, ಚಿತ್ರಾನ್ನ, ಬೆಲ್ಲದ ಸಜ್ಜಿಗೆ ತಯಾರಿಸಲಾಗುತ್ತದೆ. ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದಕ್ಕೆ ನಿತ್ಯವೂ ಪಾಯಸ, ಸಿಹಿ ಬೂಂದಿ, ತರಕಾರಿ ಹುಳಿ, ಅನ್ನ, ಸಾಂಬಾರ್, ಮಜ್ಜಿಗೆ ಸಿದ್ಧಪಡಿಸಲಾಗುತ್ತದೆ. ವಿಶೇಷ ದಿನದಂದು ಗೋಧಿ ಪಾಯಸ, ಮೈಸೂರು ಪಾಕ್ ಮತ್ತು ಬಿಸಿಬೇಳೆ ಬಾತ್‍ನ್ನು ತಯಾರಿಸಲಾಗುತ್ತದೆ.
ಸಾರಿಗೆ ಸಂಪರ್ಕ: ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವವರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಖಾಸಗಿ ಸಾರಿಗೆ ಸಂಸ್ಥೆಗಳು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದ ಶ್ರೀ ಸುತ್ತೂರು ಕ್ಷೇತ್ರಕ್ಕೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಿವೆÉ. ದೂರದಿಂದ ಬರುವವರಿಗೆ ತಾತ್ಕಾಲಿಕ ಕುಟೀರಗಳಲ್ಲಿ ವಾಸ್ತವ್ಯಕ್ಕೂ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಪ್ರಭಾತ್ ಪೇರಿ : ಪ್ರತಿದಿನ ಬೆಳಗ್ಗೆ ಅಕ್ಕಪಕ್ಕದ ಗ್ರಾಮಗಳಲ್ಲಿ ಸ್ನೇಹ-ಸೌಹಾರ್ದ-ಶಾಂತಿ ಪ್ರ್ರಾರ್ಥನಾ ಸಂಚಲನದ ಪ್ರಭಾತ್ ಪೇರಿ ಇರುತ್ತದೆ. ನಂತರ ಶ್ರೀಗಳವರೊಬ್ಬರು ಧ್ವಜಾರೋಹಣ ನೆರವೇರಿಸುತ್ತಾರೆ, ಮತ್ತೊಬ್ಬರು ಧರ್ಮಸಂದೇಶ ನೀಡುತ್ತಾರೆ.
• ಶಿವದೀಕ್ಷೆ ಪಡೆಯಲಿಚ್ಚಿಸುವವರು ಫೆಬ್ರವರಿ 7ರ ಬುಧವಾರ ಸಂಜೆ ಶ್ರೀಕ್ಷೇತ್ರದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
• ಸುತ್ತೂರು ಜಗದ್ಗುರು ಶ್ರೀ ಶಿವರಾತ್ರೀಶ್ವರ ಪ್ರಸಾದನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ಸಭೆಯನ್ನು 9 ಶುಕ್ರವಾರದಂದು ಏರ್ಪಡಿಸಲಾಗಿದೆ.
ಜಾತ್ರಾ ಮಹೋತ್ಸವದಲ್ಲಿ ಪೂಜ್ಯ ಮಠಾಧೀಶರು, ಧರ್ಮಗುರುಗಳು, ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರುಗಳು, ಸಂಸದರು, ಶಾಸಕರು, ಗಣ್ಯರು, ಸಾಹಿತಿಗಳು, ಉದ್ಯಮಿಗಳು ಹಾಗೂ ಕಲಾವಿದರು ಪಾಲ್ಗೊಳ್ಳಲಿದ್ದಾರೆ.
ಈ ಎಲ್ಲ ಕಾರ್ಯಕ್ರಮಗಳಲ್ಲಿಯೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಗುರುಕೃಪೆಗೆ ಪಾತ್ರರಾಗಬೇಕಾಗಿ ಕೋರಿದೆ. ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳನ್ನು ನೇರವಾಗಿ hಣಣಠಿs://ತಿತಿತಿ.ಥಿouಣube.ಛಿom/@ಎSSಒಚಿhಚಿviಜಥಿಚಿಠಿeeಣhಚಿoಟಿಟiಟಿeನಲ್ಲಿ ವೀಕ್ಷಿಸಬಹುದು.