ಗ್ರಾಮಗಳ ಸರ್ವತೋಮುಖ ಅಭಿವೃದ್ದಿಗೆ ಆಧ್ಯತೆ

ಅರಳೀಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ
ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆ ಯೋಜನೆ ಅನುದಾನ 50 ಲಕ್ಷ ರೂ. ವೆಚ್ಚದಲ್ಲಿ ತಾಲ್ಲೂಕಿನ ಅರಳೀಪುರ ಗ್ರಾಮದ ಪರಿಶಿಷ್ಟ ಜಾತಿ ಬಡಾವಣೆಯಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಎಂಎಸ್‍ಐಎಲ್ ಅಧ್ಯಕ್ಷರು ಆದ ಶಾಸಕ ಸಿ.ಪುಟ್ಟರಮಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಕ್ಷೇತ್ರವ್ಯಾಪ್ತಿಯ ಗ್ರಾಮಗಳಿಗೆ ಬೇಕಾದ ರಸ್ತೆ,ಚರಂಡಿ ಸಮುದಾಯಭವನ, ಕುಡಿಯುವ ನೀರು ಸೌಲಭ್ಯ, ಗಂಗಾ ಕಲ್ಯಾಣಯೋಜನೆಯಡಿ ಸಾಲಸೌಲಭ್ಯ ವಿತರಣೆ,

ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ, ನಿವೇಶನ, ಸೇರಿದಂತೆ ಸರಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಸಮಗ್ರವಾಗಿ ಒದಗಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ರಸ್ತೆ, ಚರಂಡಿಯಿಲ್ಲದಿರುವ ಗ್ರಾಮಗಳನ್ನು ಗುರುತಿಸಿ, ಸರಕಾರದಿಂದ ಸೂಕ್ತ ಅನುದಾನ ಬಿಡುಗಡೆ ಮಾಡಿಸಿ, ಅಭಿವೃದ್ದಿ ಪಡಿಸಲಾಗುವುದು ಎಂದು ತಿಳಿಸಿದರು.

ಸಂಬಂಧಪಟ್ಟ ಗುತ್ತಿಗೆದಾರರು, ಎಂಜಿನಿಯರ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಪದ್ಮಾ, ಉಪಾಧ್ಯಕ್ಷ ಸಾದಿಕ್ ಉಲ್ಲಾ, ಸದಸ್ಯರಾದ ವಸಂತ ಗೋವಿಂದರಾಜು, ಭಾಗ್ಯ, ಜಿ. ಮಹದೇವಸ್ವಾಮಿ, ಜಯಶಂಕರ್ , ಮುಖಂಡರಾದ ಚಿಕ್ಕಮಹದೇವ್, ರಂಗಸ್ವಾಮಿ, ವೀರಭದ್ರಸ್ವಾಮಿ, ಉಮೇಶ್, ರಾಜು, ಸೇರಿದಂತೆ ಕೆಆರ್‍ಐಡಿಎಲ್‍ಎಂಜಿನಿಯರ್ ಮಹದೇವ ಪ್ರಸಾದ್, ಗ್ರಾಮಸ್ಥರು ಹಾಜರಿದ್ದರು.

Leave a Reply

Your email address will not be published. Required fields are marked *