ಸೆ. 2ರಂದು ಚಾಮರಾಜನಗರ ಜಿಲ್ಲೆಗೆ ಉಪಮುಖ್ಯಮಂತ್ರಿ

  • ವಿವಿಧ ತಾಲೂಕುಗಳ ಬರಪೀಡಿತ ಸ್ಥಳಗಳ ಪರಿಶೀಲನೆ
ಚಾಮರಾಜನಗರ: ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಸೆಪ್ಟೆಂಬರ್ 2ರಂದು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ವಿವಿಧ ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವರು. 

ಅಂದು ಬೆಳಿಗ್ಗೆ 10 ಗಂಟೆಯಿಂದಲೇ ಜಿಲ್ಲೆಯ ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು ಹಾಗೂ ಹನೂರು ತಾಲೂಕುಗಳ ಬರಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಮಧ್ಯಾಹ್ನ 4.30 ಗಂಟೆಗೆ ಹನೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬರ ಪರಿಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 6 ಗಂಟೆಗೆ ಬೆಂಗಳೂರಿಗೆ ತೆರಳುವರು.

Leave a Reply

Your email address will not be published. Required fields are marked *