ಸೆ. 23ರಂದು ನಗರದಲ್ಲಿ ಶಿಕ್ಷಕರ ದಿನಾಚರಣೆ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸೆಪ್ಟೆಂಬರ್ 23ರಂದು ನಗರದ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 9.30 ಗಂಟೆಗೆ ಡಾ. ಎಸ್. ರಾಧಾಕೃಷ್ಣನ್ ಮತ್ತು ಸಾವಿತ್ರಿಬಾಯಿ ಫುಲೆ ರವರ ಭಾವಚಿತ್ರದ ಮೆರವಣಿಗೆಯು ನಗರದ ಸರ್ಕಾರಿ ಪೇಟೆ ಹಿರಿಯ ಪ್ರಾಥಮಿಕ ಶಾಲೆ ಆವರಣದಿಂದ ಆರಂಭವಾಗಲಿದೆ. ಬೆಳಿಗ್ಗೆ 10 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಪಶುಸಂಗೋಪನೆ, ರೇμÉ್ಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೈಸೂರು ಸೇಲ್ಸ್ ಇಂಟರ್‍ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಎಸ್. ಜಯಣ್ಣ, ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್, ನಗರಸಭೆ ಅಧ್ಯಕ್ಷರಾದ ಸುರೇಶ್ ನಾಯಕ, ಚಾಮರಾಜನಗರ ಮತ್ತು ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ (ಮುನ್ನ), ನಗರಸಭಾ ಉಪಾಧ್ಯಕ್ಷರಾದ ಮಮತ ಬಾಲಸುಬ್ರಹ್ಮಣ್ಯಂ, ನಗರಸಭಾ ಸದಸ್ಯರಾದ ಎಂ. ಮಹೇಶ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಹೆಚ್.ವಿ ಚಂದ್ರು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಮೈಸೂರು ಸೆಂಟ್‍ಫಿಲೋಮಿನಾ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಎಂ. ಕೃಷ್ಣೇಗೌಡ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *