ಸೆ. 26ರಂದು ಯಳಂದೂರು ತಾಲೂಕಿನ ಅಗರ ಗ್ರಾಮದಲ್ಲಿ ತಾಲೂಕು ಪ್ರಜಾಸೇವೆ ಆಂದೋಲನ ಸಭೆ

ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆ ಹಾಗೂ ಇತರೆ ಎಲ್ಲಾ ಇಲಾಖೆಗಳ ಸಂಬಂಧ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲು ತಾಲೂಕುಮಟ್ಟದ ಪ್ರಜಾಸೇವೆ ಆಂದೋಲನ ಸಭೆ  ಕಾರ್ಯಕ್ರಮವನ್ನು ಸೆಪ್ಟೆಂಬರ್ 26ರಂದು ಬೆಳಿಗ್ಗೆ 11 ಗಂಟೆಗೆ ಯಳಂದೂರು ತಾಲೂಕಿನ ಅಗರ ಗ್ರಾಮದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 

ಸಾರ್ವಜನಿಕರು ಯಾವುದೇ ಇಲಾಖೆಯ ಕುಂದು ಕೊರತೆಗಳಿದ್ದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಿಗದಿತ ಕೌಂಟರ್‍ ಗಳಲ್ಲಿ ನೋಂದಾಯಿಸಿಕೊಂಡು ಲಿಖಿತವಾಗಿ ಅಹವಾಲು ಅರ್ಜಿಗಳನ್ನು ಸಲ್ಲಿಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *