ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 30 ರಿಂದ ಮೇ 13ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕಾರ್ಯ ಸಂಬಂಧ ನಿಯೋಜಿತ ಅಧಿಕಾರಿಗಳು ಯಾವುದೇ ಲೋಪವಿಲ್ಲದೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ 4 ಪರೀಕ್ಷಾ ಕೇಂದ್ರಗಳು ಇದ್ದು, ಒಟ್ಟು 1541 ಪುನರಾವರ್ತಿತಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಗಳು ನಡೆಯುವ ದಿನಾಂಕದಂದು ಪೆÇಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಪರೀಕ್ಷಾ ಚಟುವಟಿಕೆಗಳಿಗೆ ಒದಗಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯಕ್ಕೆ ತಕ್ಕಂತೆ ಮಹಿಳಾ ಪೆÇಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರು ಶುಶ್ರೂಷÀಕರನ್ನು ಪ್ರಥಮ ಚಿಕಿತ್ಸಾ ಕಿಟ್ ನೊಂದಿಗೆ ನೇಮಿಸಬೇಕು. ಪರೀಕ್ಷಾ ದಿನಗಳಂದು ಹಾಗೂ ವಿದ್ಯಾರ್ಥಿಗಳು ಅಭ್ಯಾಸ ಮಾಡಲು ತೊಂದರೆಯಾಗದಂತೆ ವಿದ್ಯುತ್ ಪೂರೈಸಲು ಚೆಸ್ಕಾಂ ಅಧಿಕಾರಿಗಳು ಕ್ರಮವಹಿಸಬೇಕೆಂದು ಸೂಚಿಸಿದ್ದಾರೆ.
ಜಿಲ್ಲೆಯ ತಾಲ್ಲೂಕಿನ ಅಂಚೆ ಕಚೇರಿಯು ಪರೀಕ್ಷಾ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳಿಂದ ಸ್ವೀಕೃತಗೊಳ್ಳುವ ಗೌಪ್ಯ ವಸ್ತುಗಳನ್ನು ಸ್ವೀಕರಿಸಲು ಸಂಜೆ 5 ಗಂಟೆಯವರೆಗೂ ಕಾರ್ಯನಿರ್ವಹಿಸಬೇಕು.
ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಅವರ ಗ್ರಾಮಗಳಿಂದ ಕೆಎಸ್‍ಆರ್‍ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಆದೇಶಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ಪರೀಕ್ಷಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಬಸ್ಸಿನ ಸೌಲಭ್ಯವನ್ನು ಒದಗಿಸಲು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವ್ಯಾಪ್ತಿಯನ್ನು ನಿμÉೀದಿತ ಪ್ರದೇಶವೆಂದು ಘೋಷಿಸಲಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರವಾಗುವ ಸುಳ್ಳು ಸುದ್ದಿಗಳಿಗೆ ವಿದ್ಯಾರ್ಥಿಗಳು, ಪೆÇೀಷಕರು, ಸಾರ್ವಜನಿಕರು ಕಿವಿ ಕೊಡಬಾರದು. ಪರೀಕ್ಷಾ ಪಾವಿತ್ರತೆಯನ್ನು ಕಾಪಾಡಿಕೊಂಡು ಶಿಸ್ತು ಭದ್ರವಾಗಿ ಪರೀಕ್ಷೆಯನ್ನು ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ, ಪ್ರಾಂಶುಪಾಲರಿಗೆ ಜಿಲ್ಲಾಧಿಕಾರಿ ಶ್ರೀರೂಪ ಅವರು ನಿರ್ದೇಶನ ನೀಡಿದ್ದಾರೆ.
Like this:
Like Loading...
Related