ಹಿರಿಯರು ನಾಗರಿಕರು ಕ್ರೀಡೆಗಳಲ್ಲಿ ಪಾಲ್ಗೊಂಡು ಜೀವನೋತ್ಸಾಹ ಹೆಚ್ಚಿಸಿಕೊಳ್ಳಿ : ಜಿಲ್ಲಾಧಿಕಾರಿ ಶ್ರೀರೂಪ

ಚಾಮರಾಜನಗರ: ಹಿರಿಯ ನಾಗರಿಕರು ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೈನಂದಿನ ಜೀವನವನ್ನು ಉಲ್ಲಾಸ, ಉತ್ಸಾಹದಿಂದ ಸಾಗಿಸುವ ಮೂಲಕ ಜೀವನೋತ್ಸಾಹ ಹೆಚ್ಚಿಸಿಕೊಳ್ಳುವಂತೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಸಲಹೆ ಮಾಡಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರಿಕರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ನಾಗರಿಕರು ವಯಸ್ಸಾಗಿದೆ ಎಂದು ಜೀವನದಲ್ಲಿ ಉತ್ಸಾಹ ಕಳೆದುಕೊಳ್ಳದೇ ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗವಹಿಸಬೇಕು. ಸೋಲು-ಗೆಲುವನ್ನು ಬದಿಗೆ ಸರಿಸಿ ಕ್ರೀಡಾಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರಿಂದ ಜೀವನದುದ್ದಕ್ಕೂ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಪ್ರತಿನಿತ್ಯದ ಜೀವನದಲ್ಲಿ ಹೆಚ್ಚು ಲವಲವಿಕೆ ಹೊಂದಿ ಆತ್ಮವಿಶ್ವಾಸ ವೃದ್ಧಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಹಿರಿಯರ ಮೌಲ್ಯಯುತ ಜೀವನಾದರ್ಶಗಳು ಇಂದಿನ ಯುವಜನತೆಗೆ ಮಾರ್ಗದರ್ಶಿಯಾಗಿವೆ. ಸಮಾಜದಲ್ಲಿ ಹಿರಿಯರನ್ನು ಕಡೆಗಣಿಸದೇ ಮಕ್ಕಳು, ಪೋಷಕರು ಗೌರವದಿಂದ ನಡೆಸಿಕೊಳ್ಳಬೇಕು. ಹಿರಿಯ ನಾಗರಿಕರ ಅನುಭವಗಳು ನಮ್ಮೆಲ್ಲರಿಗೂ ದಾರಿದೀಪವಾಗಿವೆ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಮಕ್ಕಳು, ಯುವಜನರು ಸೇರಿದಂತೆ ಪ್ರತಿಯೊಬ್ಬರು ಹಿರಿಯರನ್ನು ಗೌರವಿಸುವಂತೆ ಜಿಲ್ಲಾಧಿಕಾರಿಗಳಾದ ಶ್ರೀರೂಪ ಅವರು ಸಲಹೆ ಮಾಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ಅವರು ಮಾತನಾಡಿ ವಿಶ್ವ ಹಿರಿಯ ನಾಗರಿಕರ ದಿನವನ್ನು ಪ್ರತಿವರ್ಷ ಅಕ್ಟೋಬರ್ 1ರಂದು ಆಚರಿಸಲಾಗುತ್ತದೆ. ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಸರ್ಕಾರವು ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಹಿರಿಯ ನಾಗರಿಕರು ಸಮಾಜ ಹಾಗೂ ಕುಟುಂಬದ ಪ್ರಮುಖ ಆಧಾರಸ್ತಂಭಗಳಾಗಿದ್ದು, ದೈಹಿಕ, ಮಾನಸಿಕ ಆರೋಗ್ಯ ಉತ್ತಮಪಡಿಸಿಕೊಳ್ಳಲು ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ಹಿರಿಯ ನಾಗರಿಕರಿಗೆ ಅವಶ್ಯವಾಗಿವೆ ಎಂದರು.

ಜೀವನದಲ್ಲಿ ಸಾಕಷ್ಟು ಕಷ್ಟ-ಕಾರ್ಪಣ್ಯಗಳನ್ನು ದಾಟಿ ಬಂದಿರುವ ಹಿರಿಯರನ್ನು ಇತ್ತೀಚೆಗೆ ಕಡೆಗಣಿಸಿ ತುಚ್ಛವಾಗಿ ಕಾಣುತ್ತಿರುವುದು ಕಂಡುಬಂದಿದೆ. ಇದು ಸಲ್ಲದು, ಹಿರಿಯ ನಾಗರಿಕರನ್ನು ಗೌರವಾಧರಗಳಿಂದ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಿರಿಯರ ಮಹತ್ವದ ಅನುಭವಗಳು ಯುವಜನಾಂಗಕ್ಕೆ ತುಂಬಾ ಅತ್ಯಗತ್ಯವಾಗಿವೆ. ಹಿರಿಯರ ಮಾರ್ಗದರ್ಶನಗಳು ನಮಗೆ ನಿರ್ದೇಶನಗಳಾಗಬೇಕು. ಪಿಂಚಣಿ, ಬಸ್‍ಗಳಲ್ಲಿ ರಿಯಾಯಿತಿ ದರದಲ್ಲಿ ಪ್ರಯಾಣ, ನ್ಯಾಯಾಲಯಗಳಲ್ಲಿ ಹಿರಿಯ ನಾಗರಿಕರ ಪ್ರಕರಣಗಳ ತ್ವರಿತ ಇತ್ಯರ್ಥ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ತಿಳಿಸಿದರು.

ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಡಾ. ಕೆ.ಎನ್. ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಸುಭದ್ರದೇವಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ಬಳಿಕ 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಬಿರುಸಿನ ನಡಿಗೆ, ಮ್ಯೂಸಿಕಲ್ ಚೇರ್ ಹಾಗೂ ಬಕೆಟ್‍ನಲ್ಲಿ ಬಾಲ್ ಎಸೆಯುವ ಕ್ರೀಡಾ ಸ್ಪರ್ಧೆಗಳು ಹಾಗೂ ಗಾಯನ ಹಾಗೂ ಏಕಪಾತ್ರಾಭಿನಯದ ಸಾಂಸ್ಕøತಿಕ ಸ್ಫರ್ಧೆಗಳು ನಡೆದವು. ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ 150ಕ್ಕೂ ಅಧಿಕ ಮಂದಿ ಹಿರಿಯ ನಾಗರಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *