
ಚಾಮರಾಜನಗರ, ಜು.21: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಚಿಕ್ಕಮಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿರುವ ಪತ್ರಿಕಾ ದಿನಾಚರಣೆ ಹಾಗೂ ಕೆಯುಡಬ್ಲ್ಯೂಜೆ (KUWJ) ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಾಮರಾಜನಗರ ಜಿಲ್ಲೆಯ ಗೋರುಕನ ದಿನಪತ್ರಿಕೆಯ ಹಿರಿಯ ಛಾಯಾಗ್ರಾಹಕ ಕೆ.ಎ. ಶ್ರೀನಿವಾಸ್ (ಬಿಳಿಗಿರಿ ಶ್ರೀನಿವಾಸ್) ಅವರಿಗೆ ರಾಜ್ಯ ಮಟ್ಟದ ವಿಶೇಷ ಪ್ರಶಸ್ತಿ ಲಭಿಸಿದೆ.
ಛಾಯಾಗ್ರಹಣ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆ ಹಾಗೂ ಪತ್ರಿಕೋದ್ಯಮಕ್ಕೆ ನೀಡಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಕೆ.ಎ. ಶ್ರೀನಿವಾಸ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.