ಹಿರಿಯ ಪತ್ರಿಕಾ ಛಾಯಾಗ್ರಾಹಕ ಬಿಳಿಗಿರಿ ಶ್ರೀನಿವಾಸ್‌ಗೆ ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಚಿಕ್ಕಮಂಗಳೂರು ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ದತ್ತಿ ಪ್ರಶಸ್ತಿ ಹಾಗೂ ಹಿರಿಯ ಪತ್ರಕರ್ತರ ಸನ್ಮಾನ ಸಮಾರಂಭದಲ್ಲಿ ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಕೆ.ಎ. ಶ್ರೀನಿವಾಸ್ (ಬಿಳಿಗಿರಿ ಶ್ರೀನಿವಾಸ್) ಅವರಿಗೆ ‘ಕೆಯುಡಬ್ಲ್ಯೂಜೆ ಕೊಡಮಡುವ ವಿಶೇಷ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ
ಎಮ್ ಎಲ್ ಸಿ ಸಿ ಟಿ ರವಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಸ್ತುವಾರಿ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಜನಮಿತ್ರ ದಿನಪತ್ರಿಕೆಯ ಮುಖ್ಯಸ್ಥ ಮದನ್ ಗೌಡ, ಚಿಕ್ಕಮಂಗಳೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದಲಿಂಗಸ್ವಾಮಿ ಹಾಗೂ ರಾಜ್ಯ ಸಮಿತಿ ಸದಸ್ಯ ಮಹೇಂದ್ರ
ಬಿಳಿಗಿರಿ ಶ್ರೀನಿವಾಸ್ ಸ್ನೇಹಿತರಾದ ಪ್ರದೀಪ್, ಸೇರಿದಂತೆ ವಿವಿಧ ಜಿಲ್ಲೆಗಳ ಪತ್ರಕರ್ತರು ಮತ್ತು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆ.ಎ. ಶ್ರೀನಿವಾಸ್ ಅವರಿಗೆ ದೊರೆತ ಈ ವಿಶೇಷ ಪ್ರಶಸ್ತಿಗೆ ಚಾಮರಾಜನಗರ ಜಿಲ್ಲೆಯ ಪತ್ರಕರ್ತರು ಹಾಗೂ ಸ್ನೇಹಿತರು ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *