ಚಾಮರಾಜನಗರ. ಸ 5 ಭಾರತ ಸರ್ಕಾರದ ಮೈ ಭಾರತ ಕೇಂದ್ರ ,ಜಿಲ್ಲಾ ಯುವಜನಾಧಿಕಾರಿಯಾಗಿ ಶಾಲೀಮ್ ಫಿಲಿಪ್ ಥಾಮಸ್ ನೂತನ ಅಧಿಕಾರಿ ಸ್ವೀಕರಿಸಿದರು.
ನಗರದ ಜಿಲ್ಲಾ ಆಡಳಿತ ಭವನದ ಎರಡನೇ ಮಹಡಿಯಲ್ಲಿರುವ ಕೇಂದ್ರ ಸರ್ಕಾರದ ಮೈ ಭಾರತ್ ಕೇಂದ್ರ ಕಛೇರಿಯಲ್ಲಿ ಜಿಲ್ಲಾ ಯುವಜನ ಅಧಿಕಾರಿಯಾಗಿ ಒಂದು ವರ್ಷ ಸೇವೆ ಸಲ್ಲಿಸಿದ ನಂತರ ಪಿ ಅಖಿಲ್ ಮೈಸೂರಿಗೆ ವರ್ಗಾವಣೆಯಾದ ಹಿನ್ನೆಲೆ ಅವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ಯೋಜನೆಗಳನ್ನು ಸಂಘ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ರೂಪಿಸಲಾಗುತ್ತದೆ ಹಾಗೂ ಕ್ರೀಡಾ ಚಟುವಟಿಕೆಗಳು ರೂಪಿಸಲಾಗುತ್ತದೆ ಎಂದು ತಿಳಿಸಿದರು.
ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ. ಶ್ರೀ ವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಪ್ರಶಸ್ತಿ ವಿಜೇತರಾದ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ ಬಂಗಾರು ಕಳೆದ 20 ವರ್ಷದಿಂದ ಹಲವಾರು ರಾಷ್ಟ್ರೀಯ ನಾಯಕ ಜಯಂತಿ. ಪರಿಸರ ದಿನಾಚರಣೆ. ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮುಖ್ಯವಾಹನಿಗೆ ಬರಲು ಹಲವಾರು ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನೆ ಸೊಸೈಟಿ ಅಧಿಕಾರಿ ಎಂ ಮಹೇಶ್ ಮಾತನಾಡಿ. ಗಡಿ ಜಿಲ್ಲೆ ಚಾಮರಾಜನಗರ ಎಸ್ಸಿ ,ಎಸ್ಟಿ ಒಬಿಸಿ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಮಾಡುವ ಜಿಲ್ಲೆ ಪ್ರವಾಸದ್ಯಮ. ಧಾರ್ಮಿಕ ಸ್ಥಳಗಳಿಗೆ ಹೆಚ್ಚಿನ ಪ್ರಮುಖತೆ ನೀಡಲಾಗಿದೆ ಎಂದು ತಿಳಿಸಿದರು. ನಿರ್ಗಮಿತ ಅಧಿಕಾರಿ ಅಖಿಲ್ ಪಿ ರವರಿಗೆ ಮೈ ಭಾರತ್ ಕೇಂದ್ರ ಸಹನ ಸನ್ಮಾನಿಸಿ ಮಾತನಾಡಿದರು.
