- ಅರಣ್ಯ ಸಿಬ್ಬಂದಿ ಗುಂಡಿಗೆ ಮೂವರು ಬೇಟೆಗಾರರ ಬಲಿ
ಚಾಮರಾಜನಗರ : ಅರಣ್ಯ ಸಿಬ್ಬಂದಿ ಮತ್ತು ಕಳ್ಳ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದ ಪರಿಣಾಮ ಮೂವರು ಕಳ್ಳ ಬೇಟೆಗಾರರು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಸಮೀಪದ ಮರಿಯ ಮಂಗಲ ಬೀಟ್ನಲ್ಲಿ ಶನಿವಾರ ಮುಂಜಾನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶಾಗ್ಯ ಸಮೀಪದ ಮರಿಯ ಮಂಗಲ ಬೀಟ್ನಲ್ಲಿ ತೊಮಿಯರ್ ಪಾಳ್ಯ ಗ್ರಾಮದ ಅಂತೊಣಿಸ್ವಾಮಿ , ಪೀಟರ್ , ಕುಮಾರ್ ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿದ್ದರು ಎನ್ನಲಾಗುತ್ತಿದ್ದು, ಇವರು ವನ್ಯ ಜೀವಿಗಳ ಕಳ್ಳ ಬೇಟೆಗಾರರು ಎಂದು ಹೇಳಲಾಗುತ್ತಿದೆ.

ಶನಿವಾರ ಮುಂಜಾನೆ ಮರಿಯಾ ಮಂಗಲದಲ್ಲಿ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿಗಳು ಕಳ್ಳಬೇಟೆಗಾರರನ್ನು ಕಂಡ ಕೂಡಲೇ ಗುಂಡಿನ ದಾಳಿ ನಡೆಸಿದಾಗ ಮೂವರು ಮೃತಪಟ್ಟರು ಎನ್ನಲಾಗಿದೆ. ಮೃತ ದೇಹಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಪೊಲೀಸ್ ಬಂದೂಬಸ್ತ್ ಮಾಡಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
