ಸಿಎಂಯಾಗಿ ಸಿದ್ದರಾಮಯ್ಯ ಮುಂದುವರಿಯಲಿ ಇಲ್ಲವೇ ಜಿ.ಪರಮೇಶ್ವರ ಸಿಎಂ ಮಾಡಲಿ: ವೆಂಕಟರಮಣಸ್ವಾಮಿ

  • ಒಳಮೀಸಲಾತಿ ಅನುಷ್ಠಾನವಾಗುವ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿದರೆ ದಲಿತರಿಗೆ ಅನ್ಯಾಯ

ಚಾಮರಾಜನಗರ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಳಿಯಲಿ ಇಲ್ಲವೇ ಜಿ.ಪರಮೇಶ್ವರ ಸಿಎಂ ಆಗಲಿ ಎಂದು ದಲಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ಪಾಪು ಒತ್ತಾಯಿಸಿದರು.
   ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಯಾಗಿ ಮಾಡಬೇಕು ಎಂದು ಕಾಂಗ್ರೆಸ್ ವರಿಷ್ಟರನ್ನು ಒತ್ತಾಯಿಸಿದರು.
ಜಟಿಲ ಒಳಮೀಸಲಾತಿ ಸಮಸ್ಯೆ ಪರಿಹರಿಸಿ ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಹಾಗೂ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿದರೆ ದಲಿತ ಸಮುದಾಯಕ್ಕೆ ಬಾರಿ ಅನ್ಯಾಯ ಆಗುತ್ತದೆ. ನಮ್ಮ ಸಮುದಾಯ ಹಿತದೃಷ್ಟಿಯಿಂದ ನೀವು ಮುಖ್ಯಮಂತ್ರಿಯಾಗಿ ಉಳಿಯಬೇಕು. ಇಲ್ಲವೇ ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಯಾಗಿ ಮಾಡಬೇಕು ಎಂದು ಪಾಪು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ   ಸಿ.ಎಂ.ಶಿವಣ್ಣ,  ಜನಶಕ್ತಿ  ಹೋರಾಟ  ವೇದಿಕೆ ರಾಮಸಮುದ್ರ ಸುರೇಶ್, ಕಲಾವಿದ ಹೆಚ್.ಮಹದೇವ, ರಂಗಸ್ವಾಮಿ, ಗೌರಿಶಂಕರ್ ಹಾಜರಿದ್ದರು.

Leave a Reply

Your email address will not be published. Required fields are marked *