ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ನಗರದ ಜೆ.ಎಸ್.ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠೇರಾಜೇ ಅರಸ್ ಅವರು ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರಂ ವಿತರಿಸಲಿದ್ದಾರೆ. ಇದನ್ನು ಭರ್ತಿ ಮಾಡಿ ನೀಡುವ ಮೂಲಕ ಸಂಪೂರ್ಣ ಸಹಕಾರ ನೀಡಬೇಕು ಎಂದರು.
ವಿಶೇಷ ಸಮಗ್ರ ಪರಿಷ್ಕರಣೆಯ ಉದ್ದೇಶವು ಎಲ್ಲಾ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ. ಈ ವಿಶೇಷ ಪರಿಷ್ಕರಣೆ ಅವಧಿಯಲ್ಲಿ ಮತದಾರರ ಹೆಸರು ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಹಾಗೂ ಖಾತರಿಪಡಿಸಿಕೊಳ್ಳಬೇಕು ಎಂದು ಶ್ರೀಕಂಠರಾಜೇ ಅರಸ್ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಇತರರು ಇದ್ದರು.
Like this:
Like Loading...
Related