ಚಾಮರಾಜನಗರ: ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕುರಿತು ಚಾಮರಾಜನಗರದ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠೇರಾಜೇ ಅರಸ್ ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳಲು ಅಧಿಸೂಚನೆ ಹೊರಡಿಸಿ ವೇಳಾಪಟ್ಟಿಯನ್ನು ನೀಡಿದೆ. ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿಯು ಜಿಲ್ಲೆಯಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶಪಾಲರಾದ ನಿರ್ಮಲ ರವರು ಮಾತನಾಡಿ ಕಾಲೇಜಿನಲ್ಲಿ ಇಎಲ್‍ಸಿ ಸಮಿತಿ ರಚನೆ ಮಾಡಲಾಗಿದ್ದು, ಎಲ್ಲಾ ವಿಧ್ಯಾರ್ಥಿಗಳಿಗೆ ಎಸ್.ಐಆರ್ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಇಎಲ್‍ಸಿ ಸಮಿತಿಯ ಅಧ್ಯಕ್ಷರಾದ ಸುಮಿತ್ರಾ ರವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಮನೆಗೆ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡಿದಾಗ ಸಹಕಾರ ನೀಡಬೇಕು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್.ಐ.ಆರ್ ಪ್ರಕ್ರಿಯೆಯು ಎಲ್ಲಾ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೆರ್ಪಡೆಗೊಳಿಸುವುದಾಗಿದೆ ಈ ವಿಶೇಷ ಸಮಗ್ರ ಪರಿಷ್ಕರಣೆಯ ಅವಧಿಯಲ್ಲಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
Like this:
Like Loading...
Related