ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆಯು ಪ್ರಾರಂಭಗೊಂಡಿದ್ದು, ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಒ) ಗಳು ಮನೆ ಮನೆ ಭೇಟಿ ಮಾಡಿ, ಗಣತಿ ನಮೂನೆ (ಎನ್ಯುಮರೇಷನ್ ಫಾರಂ) ಗಳನ್ನು ಮತದಾರಿಗೆ ಹಂಚಿಕೆ ಮಾಡುವ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜೂನ್ 30 ರಿಂದ ಜುಲೈ 29ರವರೆಗೆ ಮನೆ ಮನೆಗೆ ಭೇಟಿ, ಗಣತಿ ನಮೂನೆ ವಿತರಣೆ ಹಾಗೂ ಡಿಜಟಲೀಕರಣಗೊಳಿಸುವ ಅವಧಿಯಾಗಿದೆ.
ಹನೂರು ವಿಧಾನಸಭಾ ಕ್ಷೇತ್ರದಲ್ಲಿ 254 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್.ಒ) ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 224616 ಮತದಾರರಿದ್ದಾರೆ. 176913 ಮಂದಿ ಮತದಾರರಿಗೆ ಗಣತಿ ನಮೂನೆ (ಎನ್ಯುಮರೇಷನ್ ಫಾರಂ) ಗಳನ್ನು ವಿತರಿಸಲಾಗಿದ್ದು, 34449 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 241 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್.ಒ) ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 221151 ಮತದಾರರಿದ್ದಾರೆ. 201435 ಮಂದಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 43933 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 239 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್.ಒ) ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 217852 ಮತದಾರರಿದ್ದಾರೆ. 192898 ಮಂದಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 37023 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 249 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್.ಒ) ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 216605 ಮತದಾರರಿದ್ದಾರೆ. 194327 ಮಂದಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 23548 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟಾರೆ 983 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್.ಒ) ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 880224 ಮತದಾರರಿದ್ದಾರೆ. ಈ ಪೈಕಿ 765573 ಮಂದಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 138953 ಗಣತಿ ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.