ಎಸ್.ಐ.ಆರ್ ಪ್ರಕ್ರಿಯೆ ನಿರ್ವಹಣೆ : 1,83,112 ಗಣತಿ ನಮೂನೆ ಡಿಜಟಲೀಕರಣ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆಯು ಪ್ರಗತಿಯಲ್ಲಿದೆ. ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಒ) ಗಳಿಂದ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆ (ಎನ್ಯುಮರೇಷನ್ ಫಾರಂ) ಗಳನ್ನು ಮತದಾರಿಗೆ ಹಂಚಿಕೆ ಮಾಡಲಾಗುತ್ತಿದ್ದು, ಜುಲೈ 8ರವರೆಗೆ 1,83,112 ಗಣತಿ ನಮೂನೆಗಳನ್ನು ಡಿಜಟಲೀಕರಣಗೊಳಿಸಲಾಗಿದೆ.

   ಜುಲೈ 29ರವರೆಗೆ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆ ವಿತರಿಸುತ್ತಿದ್ದು, ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಪಡೆದು ಡಿಜಟಲೀಕರಣಗೊಳಿಸಲಾಗುತ್ತಿದೆ. 

   ಹನೂರು ವಿಧಾನಸಭಾ ಕ್ಷೇತ್ರದಲ್ಲಿ 254 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್.ಒ) ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 224616 ಮತದಾರರಿದ್ದಾರೆ. 195698 ಮಂದಿ ಮತದಾರರಿಗೆ ಗಣತಿ ನಮೂನೆ (ಎನ್ಯುಮರೇಷನ್ ಫಾರಂ) ಗಳನ್ನು ವಿತರಿಸಲಾಗಿದ್ದು, 45696 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದೆ. 

   ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 241 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್.ಒ) ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 221151 ಮತದಾರರಿದ್ದಾರೆ. 211523 ಮಂದಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 54825 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. 

  ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 239 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್.ಒ) ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 217852 ಮತದಾರರಿದ್ದಾರೆ. 207979 ಮಂದಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 48107 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಿದೆ. 

   ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 249 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್.ಒ) ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 216605 ಮತದಾರರಿದ್ದಾರೆ. 2,01,111 ಮಂದಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 34484 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.

   ಜಿಲ್ಲೆಯಲ್ಲಿ ಒಟ್ಟಾರೆ 983 ಮತಗಟ್ಟೆ ಮಟ್ಟದ ಅಧಿಕಾರಿಗಳಿದ್ದು (ಬಿಎಲ್.ಒ), ಒಟ್ಟು 880224 ಮತದಾರರಿದ್ದಾರೆ. ಈ ಪೈಕಿ 816311 ಮಂದಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, 1,83,112 ಗಣತಿ ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *