ಜಿಲ್ಲೆಯಲ್ಲಿ ಎಸ್.ಐ.ಆರ್ ಕಾರ್ಯ ನಿರ್ವಹಣೆ : 5,52,567 ಗಣತಿ ನಮೂನೆ ಡಿಜಿಟಲೀಕರಣ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆಯು ಪ್ರಗತಿಯಲ್ಲಿದೆ. ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಒ)ಗಳು ಮನೆ ಮನೆಗೆ ಭೇಟಿ ನೀಡಿ, ಗಣತಿ ನಮೂನೆ (ಎನ್ಯುಮರೇಷನ್ ಫಾರಂ) ಗಳನ್ನು ವಿತರಿಸುತ್ತಿದ್ದು, ಈವರೆಗೆ 5,52,567 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.

ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,24,616 ಮತದಾರರಿದ್ದು, 254 ಮತಗಟ್ಟೆ ಮಟ್ಟದ ಅಧಿಕಾರಿಗಳು 2,24,616 ಮತದಾರರಿಗೆ ಗಣತಿ ನಮೂನೆ (ಎನ್ಯುಮರೇಷನ್ ಫಾರಂ) ಗಳನ್ನು ವಿತರಿಸಿದ್ದಾರೆ. ಈ ಪೈಕಿ 1,41,209 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದೆ. 

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,21,151 ಮತದಾರರಿದ್ದು, 241 ಬಿಎಲ್.ಒ ಗಳಿಂದ 2,21,151 ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಇದರಲ್ಲಿ 1,41,153 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. 

ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,17,852 ಮತದಾರರಿದ್ದು, 239 ಮತಗಟ್ಟೆ ಮಟ್ಟದ ಅಧಿಕಾರಿಗಳು  2,17,852 ಮಂದಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಿದ್ದಾರೆ. ಈ ಪೈಕಿ 1,34,872 ಗಣತಿ ನಮೂನೆಗಳು  ಡಿಜಿಟಲೀಕರಣಗೊಂಡಿದೆ. 

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,16,605 ಮತದಾರರಿದ್ದು, 249 ಬಿಎಲ್.ಒ ಗಳು 2,16,605 ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಿದ್ದಾರೆ. ಇದರಲ್ಲಿ 1,35,333 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟಾರೆ 8,80,224 ಮತದಾರರಿದ್ದು, 983 ಮತಗಟ್ಟೆ ಮಟ್ಟದ ಅಧಿಕಾರಿಗಳು 8,80,224 ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಿದ್ದಾರೆ. 5,52,567 ಗಣತಿ ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. 

ಗೈರು ಹಾಜರಿ, ಸ್ಥಳಾಂತರ, ಮರಣ ಹೊಂದಿರುವ ಹಾಗೂ ಎರಡು ಕಡೆ ನೋಂದಣಿಯಾಗಿರುವ ಬಗ್ಗೆ ಹನೂರು ವಿಧಾನಸಭಾ ಕ್ಷೇತ್ರದಲ್ಲಿ 3169, ಕೊಳ್ಳೇಗಾಲ 10652, ಚಾಮರಾಜನಗರ 7074 ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 3268 ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 24163 ಮತದಾರರನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *