ಚಾಮರಾಜನಗರ: ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು ಅವರನ್ನು ಸನ್ಮಾನಿಸಲಾಯಿತು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳ ಕಚೇರಿಯಲ್ಲಿ ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕೆ.ವೀರಭದ್ರಸ್ವಾಮಿ ಅವರ ನೇತೃತ್ವದಲ್ಲಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು ಅವರನ್ನು ಭೇಟಿ ಮಾಡಿ ಜಿಲ್ಲೆಯ ಸಮಸ್ಯೆಗಳು , ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿಯ ಉಪಾಧ್ಯಕ್ಷ ಲಿಂಗಪ್ಪ ಮರಿಯಾಲ, ಪದಾಧಿಕಾರಿಗಳಾದ ಸ್ಟೈಲ್ ಮಂಜುನಾಥ್, ಮಹೇಶ್ ಹೊಂಗನಪುರ, ಗೌಡಿಕೆ ನಂಜುಂಡಸ್ವಾಮಿ, ಕಾಳನಹುಂಡಿ ಕುಮಾರ್, ಸಾಗಡೆ ಲೋಕೇಶ್, ರಾಮಸಮುದ್ರ ಕುಮಾರ್ ಇತರರು ಹಾಜರಿದ್ದರು