ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗ: ಬಿಇಓ ಹನುಮಶೆಟ್ಟಿ

  • ಚಂದಕವಾಡಿ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ/ಪ್ರೌಢಶಾಲಾ ಕ್ರೀಡಾಕೂಟ

ಚಾಮರಾಜನಗರ: ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ ಹೇಳಿದರು

  ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ 14/17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಚಂದಕವಾಡಿ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ/ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ರೀಡೆ ಯು ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಅತ್ಯಗತ್ಯವಾಗಿದೆ. ಇದು ಕೇವಲ ಪಠ್ಯಪುಸ್ತಕಗಳ ಜ್ಞಾನದಿಂದ ವ್ಯಕ್ತಿತ್ವದ ಸಂಪೂರ್ಣ ವಿಕಸನ ಸಾಧ್ಯವಿಲ್ಲ; ಅದಕ್ಕೆ ಕ್ರೀಡೆಯೂ ಪೂರಕವಾಗಿರಬೇಕು ಎಂದರು.

2026-27ನೇ ಸಾಲಿನಲ್ಲಿ ಕ್ರೀಡಾ ಸ್ಪರ್ಧೆಗಳನ್ನು ಇಂದಿನಿಂದ ಆರಂಭಮಾಡಿದ್ದು, ಮೊದಲಿಗೆ ಚಂದಕವಾಡಿ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದೆ. ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ. ಮಗುವಿನ ಸರ್ವತೋಮುಖ ವಿಕಸ, ಬೆಳವಣಿಗೆ ನಿಜವಾದ ಶಿಕ್ಷಣ ಎಂದು ನಾವು ವ್ಯಾಕ್ಯನ ಮಾಡಿದ್ದೇವೆ. ಮಗುವಿನ ದೈಹಿಕ, ಮಾನಸಿಕ, ಜ್ಞಾನಾತ್ಮಕ, ಭೌತಿಕ ಇರಬಹುದು. ಎಲ್ಲರೀತಿಯ ಬೆಳವಣಿಗೆಗೆ ಮಾಗದರ್ಶನ ನೀಡುವಂತಹ, ಬೆಂಬಲ ನೀಡುವಂತಹ ಎಲ್ಲಾ ಚಟುವಟಿಕೆಗಳನ್ನು ಶಾಲಾ ಹಂತದಲ್ಲಿ ನಾವು ಹಮ್ಮಿಕೊಂಡಿದ್ದೇವೆ. ಅದರಲ್ಲಿ ಕ್ರೀಡಾ ಚಟುವಟಿಕೆಯು ಒಂದಾಗಿದೆ. ಇದು ಮಕ್ಕಳಲ್ಲಿ ಕ್ರೀಡಾ ಮನೋಭಾವನೆ ಉಂಟು ಮಾಡಿ ಮೌಲ್ಯಗಳನ್ನು ಕಲಿಸಿಕೊಡುತ್ತದೆ ಎಂದರು.

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಆ ಮೂಲಕ ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ತಾಲೂಕು, ಜಿಲ್ಲೆಗೆ ಕೀರ್ತಿ ತಂದು ಕೊಡಬೇಕೆಂದು ಹೇಳಿದರು.

ಸಮಾಜಸೇವಕಿ ಗೌರಿಸಿದ್ದರಾಜು ಕಾರ್ಯಕ್ರಮ ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಬಸವರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಧನಂಜಯ್,  ತಾಲೂಕು ಸಹಶಿಕ್ಷಕರ ಸಂಘದ ಕಾರ್ಯದರ್ಶಿ ನೇಮಿರಾಜ್, ಕರ್ನಾಟಕ ರಾಜ್ಯಸರ್ಕಾರಿ ನೌಕರರ ಸಂಘದ ಸದಸ್ಯ ಎಸ್.ಮಹಾದೇವಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಕುಮಾರಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್ 1 ಸಂಘದ ಅಧ್ಯಕ್ಷ ತಗಡೂರಯ್ಯ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಿಕ್ಕಬಸವಯ್ಯ, ತಾಲೂಕು ಕಾರ್ಯದರ್ಶಿ ಶಿವಮಲ್ಲಯ್ಯ, ದೈಹಿಕ ಶಿಕ್ಷಣ ಶಿಕ್ಷಕರಾದ ಮೋಹನ್, ಮರಿಸಿದ್ದಶೆಟ್ಟಿ, ನಟರಾಜು, ಜಿ.ಮಹದೇವಯ್ಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *