ಪೊಲೀಸರ ಕಾರ್ಯಕ್ಷಮತೆ ಹೆಚ್ಚಿಸುವಲ್ಲಿ ಕ್ರೀಡೆ ಸಹಕಾರಿ : ಜಿಲ್ಲಾಧಿಕಾರಿ ಶ್ರೀರೂಪ

  • ಚಾಮರಾಜನಗರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ  ಚಾಲನೆ

ಚಾಮರಾಜನಗರ: ಪೋಲಿಸರ ಕಾರ್ಯಕ್ಷಮತೆ ಮತ್ತು ಮಾನಸಿಕ ಸದೃಢತೆಯನ್ನು ಹೆಚ್ಚಿಸುವಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಹೇಳಿದರು.
ನಗರದ ಡಿ.ಎ.ಆರ್.ಕೇಂದ್ರ ಸ್ಥಾನದಲ್ಲಿರುವ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ
ಚಾಮರಾಜನಗರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಪಾರಿವಾಳ ಮತ್ತು ಬಲೂನ್ ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ನಿರಂತರ ಒತ್ತಡ ಮತ್ತು ಸವಾಲಿನ ಕರ್ತವ್ಯಗಳ ನಡುವೆ ಕೆಲಸ ಮಾಡುವ ಪೋಲಿಸ್ ಸಿಬ್ಬಂದಿಗೆ ಕ್ರೀಡೆಗಳು ಹಲವು ರೀತಿಯಲ್ಲಿ ಸಹಕಾರಿಯಾಗಿದೆ ಎಂದರು.
ಕಾನೂನು ಸುವ್ಯವಸ್ಥೆ ಕಾಪಾಡುವಾಗ ಎದುರಾಗುವ ತೀವ್ರ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು
ಕ್ರೀಡೆಗಳು ಅತ್ಯುತ್ತಮ ಮಾಧ್ಯಮವಾಗಿದೆ ಎಂದರು. ಕ್ರೀಡಾಪಟುಗಳಿಗೆ ಶುಭಾಶಯ ಕೋರಿ ದೈಹಿಕ, ಮಾನಸಿಕ ಆರೋಗ್ಯ ವೃದ್ದಿಸುವ ಕ್ರೀಡೆಯಲ್ಲಿ ಪೊಲೀಸರ ನಿರಂತರವಾಗಿ ತೊಡಗಿಸಿಕೊಳ್ಳಬೇಕು ಎಂದರು.
  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು ಪ್ರಾಸ್ತಾವಿಕ ವಾಗಿ ಮಾತನಾಡಿ, ಪ್ರತಿವರ್ಷದಂತೆ ಈ ಬಾರಿಯು 3 ದಿನಗಳ ಕಾಲ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದರು.
ಜಿ.ಪಂ.ಸಿಇಓ ಆಕೃತಿ ಬನ್ಸಲ್ ಮಾತನಾಡಿದರು.
  ಈ ಸಂದರ್ಭದಲ್ಲಿ  ಎಸ್ ಎಸ್ಪಿ ಶಶಿಧರ್, ಡಿವೈಎಸ್ ಪಿ ಸ್ನೇಹರಾಜು, ಮೋಹನ್, ಸೋಮಣ್ಣ, ಸತೀಶ್ ಟಿಬಿ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಗಳು, ಸಬ್ ಇನ್ ಪೆಕ್ಟರ್, ಪೊಲೀಸರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *